ಮೋದಿಯವರು ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಜಪಾನ್ ಪ್ರವಾಸ ಕೈಗೊಂಡಿದ್ದಾಗ ನಾಗರಿಕ ಪರಮಾಣು ಒಪ್ಪಂದ ಜಾರಿಯಾಗುವ ಬಗ್ಗೆ ಮಾತುಕತೆ ನಡೆಸಿದ್ದರು. ಈ ಯೋಜನೆಯಿಂದ ದೇಶದ ಅಣು ವಿದ್ಯುತ್ ಯೋಜನೆಗೆ ಹೆಚ್ಚು ಅನುಕೂಲವಾಗಲಿದೆ.
ಟೋಕಿಯೊ(ನ.11): ಸತತ 6 ವರ್ಷಗಳ ಮಾತುಕತೆಯ ನಂತರ ಜಪಾನ್'ನೊಂದಿಗೆ ನಾಗರಿಕ ಪರಮಾಣು ಒಪ್ಪಂದಕ್ಕೆ ಭಾರತ ಸಹಿ ಹಾಕಿದೆ. ಮೂರು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಮೋದಿಯವರು ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಜಪಾನ್ ಪ್ರವಾಸ ಕೈಗೊಂಡಿದ್ದಾಗ ನಾಗರಿಕ ಪರಮಾಣು ಒಪ್ಪಂದ ಜಾರಿಯಾಗುವ ಬಗ್ಗೆ ಮಾತುಕತೆ ನಡೆಸಿದ್ದರು. ಈ ಯೋಜನೆಯಿಂದ ದೇಶದ ಅಣು ವಿದ್ಯುತ್ ಯೋಜನೆಗೆ ಹೆಚ್ಚು ಅನುಕೂಲವಾಗಲಿದೆ.
ನಾಗರೀಕ ಬಳಕೆಗಾಗಿ ಪರಸ್ಪರ ಸಹಕಾರಕ್ಕೆ ಭಾರತ-ಜಪಾನ್ ತೀರ್ಮಾನಿಸಲಾಗಿದ್ದು, ಇದೊಂದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿದ್ದು, ಇಡೀ ವಿಶ್ವವನ್ನು ಪೀಡಿಸುತ್ತಿರುವ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಎರಡೂ ರಾಷ್ಟ್ರಗಳು ಜಂಟಿಯಾಗಿ ಹೋರಾಟ ನಡೆಸಲಿವೆ' ಎಂದು ಮೋದಿ ತಿಳಿಸಿದ್ದಾರೆ.