Asianet Suvarna News Asianet Suvarna News

ಮಹಾತ್ಮ ಗಾಂಧಿ 150: ಸರ್ಕಾರದಿಂದ ವರ್ಷಪೂರ್ತಿ ಕಾರ್ಯಕ್ರಮ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸರ್ಕಾರ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಗಾಂಧೀಜಿ ಅವರ ಸಂದೇಶಗಳನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ಸರ್ಕಾರ ನಿರ್ಧರಿಸಿದೆ. 

India MK Gandhi 150 Yrs Centre Plans Year Long Programs
Author
Bengaluru, First Published Oct 2, 2018, 12:35 PM IST
  • Facebook
  • Twitter
  • Whatsapp

ಗಾಂಧೀಜಿ ಅವರ ಸಂದೇಶಗಳನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಳಗೊಂಡ ರಾಷ್ಟ್ರೀಯ ಸಮಿತಿಯೊಂದನ್ನು ರಚಿಸಲಾಗಿದೆ. ರಾಜಕೀಯ ಪ್ರತಿನಿಧಿಗಳು, ಗಾಂಧಿವಾಧಿಗಳು, ಚಿಂತಕರು ಈ ಸಮಿತಿಯಲ್ಲಿದ್ದಾರೆ. ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮಗಳು, ಯೋಜನೆಗಳಿಗೆ ಈ ಸಮಿತಿ ಮಾರ್ಗದರ್ಶನ ಮಾಡಲಿದೆ. 2018 ಅ.2ರಿಂದ 2020 ಅ.2ರ ವರೆಗೂ ಸರ್ಕಾರದ ವತಿಯಿಂದ ವಿವಿಧ ಕಾರ್ಯಕ್ರಮಗಳು ಜರುಗಲಿವೆ.India MK Gandhi 150 Yrs Centre Plans Year Long Programs

Follow Us:
Download App:
  • android
  • ios