ಮೊದಲ ಹಾಗೂ ಎರಡನೇ ಮಹಾಯುದ್ಧದಲ್ಲಿ ಸುಮಾರು 1.5 ಲಕ್ಷ ಭಾರತೀಯ ಯೋಧರು ಪ್ರಾಣ ತ್ಯಾಗ ಮಾಡಿದ್ದಾರೆ. ವಿಪರ್ಯಾಸವೆಂದರೆ ಇದನ್ನು ನಾವು ಪರಿಣಾಮಕಾರಿಯಾಗಿ ವಿಶ್ವಕ್ಕೆ ತಿಳಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ನವದೆಹಲಿ(ಅ.2): ಉರಿ ಘಟನೆಯ ನಂತರ ಸರ್ಜಿಕಲ್ ದಾಳಿಯ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ನಂತರ ಮೌನ ಮುರಿದಿರುವ ಪ್ರದಾನಿ ನರೇಂದ್ರ ಮೋದಿ ಅವರು ನಾವು ಯಾವುದೇ ದೇಶ, ಪ್ರದೇಶದ ಮೇಲೆ ಬೇಕಂತಲೇ ದಾಳಿ ನಡೆಸುವುದಿಲ್ಲ ಆದರೆ ನಮ್ಮ ದೇಶದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಖಡಕ್ ಸಂದೇಶ ನೀಡಿದ್ದಾರೆ.

ಮಹಾತ್ಮ ಗಾಂಧಿ ಅವರ ಜನ್ಮ ದಿನದ ಅಂಗವಾಗಿ ಪ್ರವಾಸಿ ಭಾರತೀಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶಕ್ಕೆ ಬೇರೆಯವರ ಭೂಮಿ ಹಾಗೂ ಪ್ರದೇಶದ ಮೇಲೆ ವ್ಯಾಮೋಹವಿಲ್ಲ. ಸುಖಾಸುಮ್ಮನೆ ಇನ್ನೊಬ್ಬರನ್ನು ಕೆಣಕುವುದಿಲ್ಲ. ಆದರೆ ನಮ್ಮನ್ನು ಕೆಣಕಿದರೆ ಸಹಿಸುವುದಿಲ್ಲ' ಎಂದು ತಿಳಿಸಿದರು.

ನಮ್ಮ ರಾಷ್ಟ್ರದ ಸೈನಿಕರು ಬೇರೆಯವರಿಗಾಗಿ ಪ್ರಾಣ ತೆತ್ತಿದ್ದಾರೆ. ಮೊದಲ ಹಾಗೂ ಎರಡನೇ ಮಹಾಯುದ್ಧದಲ್ಲಿ ಸುಮಾರು 1.5 ಲಕ್ಷ ಭಾರತೀಯ ಯೋಧರು ಪ್ರಾಣ ತ್ಯಾಗ ಮಾಡಿದ್ದಾರೆ. ವಿಪರ್ಯಾಸವೆಂದರೆ ಇದನ್ನು ನಾವು ಪರಿಣಾಮಕಾರಿಯಾಗಿ ವಿಶ್ವಕ್ಕೆ ತಿಳಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಸರ್ಜಿಕಲ್ ದಾಳಿಯ ನಂತರ ಯುದ್ಧದ ಸನ್ನಿವೇಶ ನಿರ್ಮಾಣವಾಗುವ ಸಂದರ್ಭದಲ್ಲಿ ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ಅಂತರರಾಷ್ಟ್ರೀಯ ಸಮುದಾಯ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಧಾನಿಯವರು ಈ ಮಾತುಗಳನ್ನು ಹೇಳುತ್ತಿದ್ದಾರೆ.

ಭಾರತವು ಅಂತರರಾಷ್ಟ್ರೀಯ ಗಡಿ ದಾಟಿ ಸರ್ಜಿಕಲ್ ದಾಳಿ ನಡೆಸಿರುವುದನ್ನು ಪಾಕಿಸ್ತಾನವು ನಿರಾಕರಿಸಿದ್ದು ಬದಲಿಗೆ ನಿಷೇಧಿಸಿರುವ ಕೆಳಮಟ್ಟದ ಪ್ರದೇಶದಿಂದ ವಾಯುದಾಳಿ ನಡೆಸಲಾಗಿದೆ ಎಂದು ತಿಳಿಸಿದೆ.

ಅನುಮಾನಗಳನ್ನು ನಿವಾರಿಸಿಕೊಳ್ಳುವ ಸಲುವಾಗಿ ಪಾಕಿಸ್ತಾನವು ವಿಡಿಯೋ ದೃಶ್ಯಗಳನ್ನು ಬಿಡುಗಡೆ ಮಾಡಬೇಕೆಂದು ಭಾರತವನ್ನು ಆಗ್ರಹಿಸಿದೆ ಆದರೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 'ಸ್ವಲ್ಪ ದಿನ ಕಾಯಿರಿ ದೃಶ್ಯವನ್ನು ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.