ನವದೆಹಲಿ (ಸೆ. 19): ವೆನಿಝುವೆಲದಲ್ಲಿ ನಡೆಯುತ್ತಿರುವ ಅಲಿಪ್ತ ದೇಶಗಳ 17ನೇ ಶೃಂಗಸಭೆಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಉರಿ ಭಯೋತ್ಪಾದನಾ ದಾಳಿಯ ಹಿನ್ನೆಲೆಯಲ್ಲಿ, ಪಾಕಿಸ್ತಾನವು ಸಂವಾದದ ಬದಲಾಗಿ ವಿಷ ಕಾರುವ ಕೆಲಸ ಮಾಡುತ್ತಿದೆ ಎಂದು ಭಾರತ ಹೇಳಿದೆ.

ಪಾಕಿಸ್ತಾನವು ಭಯೊತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ ಎಂದಿರುವ ವಿದೇಶಾಂಗ ಖಾತೆ ರಾಜ್ಯ ಸಚಿವ ಎಮ್.ಜೆ.ಅಕ್ಬರ್, ಅದು ತನ್ನ ಕಾಪಟ್ಯ ಧೋರಣೆಯಿಂದಾಗಿ ಅಂತರಾಷ್ಟ್ರೀಯ ಸಮುದಾಯದಲ್ಲಿ ಪ್ರತ್ಯೇಕವಾಗಿ ಗುರುತಿಸಲ್ಪಡುತ್ತಿದೆ ಎಂದು ಮಾಧ್ಯಮದವರನ್ನು ಉದ್ದೇಶಿಸಿ ಹೇಳಿದ್ದಾರೆ.