ನವದೆಹಲಿ(ಜು.08): ಜಮ್ಮು ಮತ್ತು ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ ನೀಡಿರುವ ವರದಿಗೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ಮತ್ತು ಸೇನೆಯಿಂದ ಮಾನವ ಹಕ್ಕು ಉಲ್ಲಂಘನೆಯಾಗಿದ್ದು, ಈ ಕುರಿತು ವಿಶ್ವ ಸಮುದಾಯ ಗಮನ ಹರಿಸುವ ಅವಶ್ಯಕತೆ ಇದೆ ಎಂದು ವಿಶ್ವಸಂಸ್ಥೆ ಮಾನವ ಹಕ್ಕು ಸಮಿತಿ ವರದಿ ಮಾಡಿದೆ.

ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಭಾರತ, ಮಾನವ ಹಕ್ಕುಗಳ ನೆರಳಲ್ಲಿ ಭಯೋತ್ಪಾದನೆಯನ್ನು ಕಾನೂನುಬದ್ಧಗೊಳಿಸುವ ಅಪಾಯ ಎದುರಾಗಿದೆ ಎಂದು ಗಂಭೀರ ಆರೋಪ ಮಾಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ, ಭಾರತದ ಆಂತರಿಕ ವಿಷಯದಲ್ಲಿ ವಿಶ್ವಸಂಸ್ಥೆ ಅನಗತ್ಯ ಹಸ್ತಕ್ಷೇಪ ಮಾಡುತ್ತಿರುವುದು ಒಪ್ಪಲು ಸಾಧ್ಯವಿಲ್ಲ ಎಂದು ಖಾರವಾಗಿ ನುಡಿದಿದೆ.