ಕಳೆದ ವರ್ಷ ಕಾಶ್ಮೀರದಲ್ಲಿ  ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ ಉಗ್ರ ಬುರ್ಹಾನ್ ವಾನಿಯನ್ನು ವೈಭವೀಕರಿಸಿದ ಪಾಕಿಸ್ತಾನದ ವಿರುದ್ಧ ಭಾರತ ಹರಿಹಾಯ್ದಿದೆ. ಪಾಕಿಸ್ತಾನವು ಭಯೋತ್ಪಾದನೆಗೆ ನೀಡುತ್ತಿರುವ ಕುಮ್ಮಕ್ಕು ಹಾಗೂ ಬೆಂಬಲವನ್ನು ಎಲ್ಲರೂ ಖಂಡಿಸಬೇಕಾಗಿದೆ ಎಂದು ಭಾರತ ಹೇಳಿದೆ.

ನವದೆಹಲಿ (ಜು. 09): ಕಳೆದ ವರ್ಷ ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ ಉಗ್ರ ಬುರ್ಹಾನ್ ವಾನಿಯನ್ನು ವೈಭವೀಕರಿಸಿದ ಪಾಕಿಸ್ತಾನದ ವಿರುದ್ಧ ಭಾರತ ಹರಿಹಾಯ್ದಿದೆ.

ಪಾಕಿಸ್ತಾನವು ಭಯೋತ್ಪಾದನೆಗೆ ನೀಡುತ್ತಿರುವ ಕುಮ್ಮಕ್ಕು ಹಾಗೂ ಬೆಂಬಲವನ್ನು ಎಲ್ಲರೂ ಖಂಡಿಸಬೇಕಾಗಿದೆ ಎಂದು ಭಾರತ ಹೇಳಿದೆ.

Scroll to load tweet…

ಪಾಕಿಸ್ತಾನವು ಬುರ್ಹಾನ್ ವಾನಿಯನ್ನು ವೈಭವೀಕರಿಸುತ್ತಿದೆ. ಪಾಕ್ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ಎಲ್ಲರೂ ಖಂಡಿಸಬೇಕು, ಎಂದು ವಿದೇಶಾಂಗ ವ್ಯವಹಾರ ಇಲಾಖೆಯ ವಕ್ತಾರ ಗೋಪಾಲ್ ಬಾಗ್ಲೆ ಹೇಳಿದ್ದಾರೆ.

ಪಾಕಿಸ್ತಾನ ಪ್ರಧಾನಿ ನಿನ್ನೆ ಬುರ್ಹಾನಿ ವಾನಿಗೆ ಶ್ರದ್ಧಾಂಜಲಿ ಅರ್ಪಿಸಿ, ಕಾಶ್ಮೀರದ ಸ್ವಾತಂತ್ರ್ಯ ಹೋರಾಟಕ್ಕೆ ಆತ ಸ್ಫೂರ್ತಿಯಾಗಿದ್ದಾನೆಂದು ಹೊಗಳಿದ್ದರು. ಇನ್ನೊಂದು ಕಡೆ ಪಾಕ್ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಾಜ್ವಾ ಕೂಡಾ ನಿನ್ನೆ ಬುರ್ಹಾನ್ ವಾನಿಯನ್ನು ಪ್ರಶಂಸಿದ್ದರು.

ಹಿಝ್ಬುಲ್ ಮುಜಾಹಿದೀನ್ ಕಮಾಂಡರ್ ಆಗಿದ್ದ ಬುರ್ಹಾನ್ ವಾನಿ ಭಾರತೀಯ ಸೇನಾಪಡೆಗಳ ಮೇಲೆ ಹಲವು ದಾಳಿಗಳನ್ನು ನಡೆಸಿದ್ದನು.