ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಿ ದೆಹಲಿಯ ಆರ್ಚ್ ಬಿಷಪ್ ಬರೆದಿರುವ ಪತ್ರಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಪಸಂಖ್ಯಾತರು ಸುರಕ್ಷಿತವಾಗಿರುವ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದ್ದು, ಇಲ್ಲಿ ಧರ್ಮ ಹಾಗೂ ಜಾತಿಯ ಕಾರಣಕ್ಕೆ ತಾರತಮ್ಯ ಮಾಡಲು ಅವಕಾಶವಿಲ್ಲ ಎಂದು ರಾಜನಾಥ್ ಹೇಳಿದ್ದಾರೆ.

ದೇಶದಲ್ಲಿ ಪ್ರಕ್ಷುಬ್ಧ ರಾಜಕೀಯ ವಾತಾವರಣ ಉಂಟಾಗಿದ್ದು, ಪ್ರಜಾಪ್ರಭುತ್ವ, ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟಾಗಿದೆ ಎಂದು ಆರ್ಚ್ ಬಿಷಪ್ ಆರೋಪಿಸಿ ಪತ್ರ ಬರೆದಿದ್ದರು. ಅಲ್ಲದೇ ೨೦೧೯ ರಲ್ಲಿ ಕೇಂದ್ರದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ತರಲು ಪ್ರತಿ ಶುಕ್ರವಾರ ಉಪವಾಸವಿದ್ದು ಪ್ರಾರ್ಥನೆ ಸಲ್ಲಿಸುವಂತೆ ದೆಹಲಿಯ ಪ್ರೀಸ್ಟ್ ಗಳಿಗೆ ಆರ್ಚ್ ಬಿಷಪ್ ಮನವಿ ಮಾಡಿರುವುದು ಇದೀಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ಆರ್ಚ್ ಬಿಷಪ್ ರ ಪತ್ರ ರಾಕೀಯ ಅಜೆಂಡಾ ಹೊಂದಿದೆ ಎಂಬ ಆರೋಪ ಕೇಳಿ ಬಂದಿದ್ದು, ಆರ್ಚ್ ಬಿಷಪ್ ಒಂದು ರಾಜಕೀಯ ಪಕ್ಷದ ಪರವಾಗಿ ಬ್ಯಾಟ್ ಬೀಸುತ್ತಿದ್ದಾರೆ ಎಂದು ಕೆಲವರು ಗಂಭೀರ ಆರೋಪ ಮಾಡಿದ್ದಾರೆ.