ರಾಜಸ್ಥಾನದ ಬಿಕಾನೇರ್ ಬಳಿ ಭಾರತೀಯ ವಾಯುಪಡೆಯ ಮಿಗ್-21 ವಿಮಾನ ಪತನವಾಗಿದೆ. ಇತ್ತೀಚೆಗೆ ಜಮ್ಮು-ಕಾಶ್ಮೀರದ ಬಡ್ಗಾಂಮ್ ಜಿಲ್ಲೆಯಲ್ಲಿ ಮಿಗ್-21 ಯುದ್ಧ ವಿಮಾನ ಪತನಗೊಂಡಿತ್ತು.
ಬಿಕಾನೇರ್ (ರಾಜಸ್ಥಾನ), [ಮಾ.08]: ರಾಜಸ್ಥಾನದ ಬಿಕಾನೇರ್ ಗ್ರಾಮೀಣ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಮಿಗ್-21 ವಿಮಾನ ಪತನಗೊಂಡಿದೆ.
ಅದೃಷ್ಟವಶಾತ್ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಯುದ್ಧ ವಿಮಾನ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ. ಆದ್ರೆ ವಿಮಾನ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಇತ್ತೀಚೆಗೆ ಜಮ್ಮು-ಕಾಶ್ಮೀರದ ಬಡ್ಗಾಂಮ್ ಜಿಲ್ಲೆಯಲ್ಲಿ ಮಿಗ್-21 ಯುದ್ಧ ವಿಮಾನ ಪತನಗೊಂಡು, ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಮತ್ತೊಂದು ವಾಯುಪಡೆಯ ವಿಮಾನ ಪತನಗೊಂಡಿದೆ.
