ಗುಣಮಟ್ಟದ ಶಿಕ್ಷಣಕ್ಕೆ ಕರ್ನಾಟಕವೇ ಅತ್ಯುತ್ತಮ ತಾಣ; ಬೆಂಗಳೂರಿಗೆ ಮತ್ತೊಂದು ಗರಿ

Indian Institute of Science makes it to top 100 in the World Reputation Rankings 2018
Highlights

ದೇಶದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಕರ್ನಾಟಕವೇ ಅತ್ಯುತ್ತಮ ತಾಣ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಟೈಮ್ಸ್‌ ಹೈಯರ್‌ ಎಜುಕೇಷನ್‌ ಬಿಡುಗಡೆ ಮಾಡಿರುವ ವಿಶ್ವದ 100 ಅತ್ಯುತ್ತಮ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಸ್ಥಾನ ಪಡೆದಿದೆ. 

ಲಂಡನ್‌ (ಜೂ. 01): ದೇಶದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಕರ್ನಾಟಕವೇ ಅತ್ಯುತ್ತಮ ತಾಣ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಟೈಮ್ಸ್‌ ಹೈಯರ್‌ ಎಜುಕೇಷನ್‌ ಬಿಡುಗಡೆ ಮಾಡಿರುವ ವಿಶ್ವದ 100 ಅತ್ಯುತ್ತಮ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಸ್ಥಾನ ಪಡೆದಿದೆ.

‘ಟೈಮ್ಸ್‌ ಉನ್ನತ ಶಿಕ್ಷಣ ವಿಶ್ವ ಖ್ಯಾತಿ ರಾರ‍ಯಂಕಿಂಗ್‌ 2018’ರಲ್ಲಿ ಬೆಂಗಳೂರಿನ ಐಐಎಸ್‌ಸಿ 91-100ರ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಈ ವಾರ್ಷಿಕ ಪಟ್ಟಿಯಲ್ಲಿ ಅಮೆರಿಕನ್‌ ಯೂನಿವರ್ಸಿಟಿ ಹಾರ್ವರ್ಡ್‌ ಮೊದಲನೇ ಸ್ಥಾನ ಪಡೆದಿದ್ದು, ಮೆಸಾಚುಸೆಟ್ಸ್‌ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಸ್ಟಾನ್‌ಫೋರ್ಡ್‌, ಕೇಂಬ್ರಿಜ್‌ ಮತ್ತು ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯಗಳು ಟಾಪ್‌ 5ರೊಳಗಿನ ಸ್ಥಾನಗಳಲ್ಲಿವೆ. 2011ರ ಬಳಿಕ ಭಾರತದ ಶಿಕ್ಷಣ ಸಂಸ್ಥೆಯೊಂದು ಇದೇ ಮೊದಲ ಬಾರಿ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. 

loader