ಬಹುನಿರೀಕ್ಷಿತ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಜುಲೈ 17ರಂದು ಮುಂದಿನ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ನವದೆಹಲಿ(ಜೂ.08): ಬಹುನಿರೀಕ್ಷಿತ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಜುಲೈ 17ರಂದು ಮುಂದಿನ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಜುಲೈ 20ರಂದು ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ನಸೀಮ್ ಝೈದಿ ಹೇಳಿದ್ದಾರೆ. ಜೂನ್ 28 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 1 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, "ಜುಲೈ 24ಕ್ಕೆ ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವಧಿ ಅಂತ್ಯವಾಗಲಿದೆ.

ಈ ಹಿನ್ನಲೆಯಲ್ಲಿ ಜುಲೈ 17ರಂದು ಚುನಾವಣೆ ನಡೆಯಲಿದೆ ಎಂದರು. ಮತ್ತೊಂದು ವಿಶೇಷವೆಂದರೆ ಇವಿಎಂ ಬದಲು ಬ್ಯಾಲೆಟ್​​ ಪೇಪರ್​​ ಬಳಸಲಿದ್ದಾರೆ.