ಭೂಗತ ಪಾತಕಿ ರವಿ ಪೂಜಾರಿ ಪೊಲೀಸ್ ವಶಕ್ಕೆ! ಸೆನೆಗಲ್ ದೇಶದಲ್ಲಿ ಪಾತಕಿ ರವಿ ಪೂಜಾರಿ ವಶಕ್ಕೆ!ಕಳೆದ 15 ವರ್ಷದಿಂದ ದುಬೈ, ಆಸ್ಟ್ರೇಲಿಯಾದಲ್ಲಿ ತಲೆಮರೆಸಿಕೊಂಡಿದ್ದ ಪಾತಕಿ!

ಬೆಂಗಳೂರು, [ಜ.31]: ಭೂಗತ ಪಾತಕಿ ರವಿ ಪೂಜಾರಿಯನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ 15 ವರ್ಷದಿಂದ ದುಬೈ, ಆಸ್ಟ್ರೇಲಿಯಾದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಇಂದು [ಗುರುವಾರ] ಸೆನೆಗಲ್ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. 

ಶಿಕ್ಷಣ ಸಚಿವರಿಗೆ ರವಿ ಪೂಜಾರಿಯಿಂದ ಜೀವ ಬೆದರಿಕೆ

60ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್ ಗಳಲ್ಲಿ ಭಾಗಿಯಾಗಿರುವ ರವಿ ಪೂಜಾರಿ ಮೇಲೆ ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿ ಹಲವೆಡೆ ಕೇಸ್ ದಾಖಲಾಗಿದ್ದವು. 

ಭೂಗತವಾಗಿದ್ದುಕೊಂಡೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರವಿ ಪೂಜಾರಿಯನ್ನು ಅರೆಸ್ಟ್ ಮಾಡಲು ಭಾರತದ ತನಿಖಾ ಸಂಸ್ಥೆಗಳು ಸೆನೆಗಲ್ ದೇಶದೊಂದಿಗೆ ಸಂಪರ್ಕದಲ್ಲಿದ್ದವು ಎಂದು ತಿಳಿದುಬಂದಿದ್ದು, ಈ ಹಿನ್ನಲೆಯಲ್ಲಿ ಸೆನೆಗಲ್ ಪೊಲೀಸರು ರವಿ ಪೂಜಾರಿಯನ್ನು ವಶಕ್ಕೆ ಪಡೆದಿರಬಹುದು ಎಂದು ಹೇಳಲಾಗುತ್ತಿದೆ.

 ಸೆನೆಗಲ್ ಪೊಲೀಸರು ರವಿ ಪೂಜಾರಿಯನ್ನು ವಶಕ್ಕೆ ಪಡೆದಿರುವುದು ಖಚಿತವಾಗಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.