ಅಚಲ್ ಕುಮಾರ್, ಪ್ರಧಾನಿ ಮೋದಿ ಅವರಿಗೆ ಆಪ್ತರಾಗಿದ್ದಾರೆ ಎಂದು ಈ ಹಿಂದೆ ಆಮ್‌ಆದ್ಮಿ ಪಕ್ಷದ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದರು
ನವದೆಹಲಿ(ಜು.03): ಮುಖ್ಯ ಚುನಾವಣಾ ಆಯುಕ್ತ ನಸೀಮ್ ಜೈದಿ ಅವರು ಜು.೬ರಂದು ನಿವೃತ್ತರಾಗುತ್ತಿದ್ದು, ಹಾಲಿ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜ್ಯೋತಿ ಅವರು ಅದೇ ದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಚಲ್ ಕುಮಾರ್, ಪ್ರಧಾನಿ ಮೋದಿ ಅವರಿಗೆ ಆಪ್ತರಾಗಿದ್ದಾರೆ ಎಂದು ಈ ಹಿಂದೆ ಆಮ್ಆದ್ಮಿ ಪಕ್ಷದ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದರು.
1975ನೇ ಬ್ಯಾಚಿನ ಗುಜರಾತ್ ಕೇಡರ್ನ ಐಎಎಸ್ ಅಧಿಕಾರಿಯಾಗಿರುವ ಜ್ಯೋತಿ ಅವರು ಗುಜರಾತಿನ ವಿಚಕ್ಷಣಾ ಆಯುಕ್ತರಾಗಿ ಮತ್ತು ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
ಅಚಲ್ ಕುಮಾರ್ ಅವರು 2015 ಮೇ 13ರಂದು ಅವರು ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು. ಅಚಲ್ ನೇತೃತ್ವದಲ್ಲಿಯೇ ಮುಂಬರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ನಡೆಯಲಿದೆ. 2018ರ ಜನವರಿಯಲ್ಲಿ ಇವರು ಹುದ್ದೆಯಿಂದ ನಿವೃತ್ತರಾಗಲಿದ್ದಾರೆ.
