ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಜನವರಿ 1ರಿಂದ `ಇಂದಿರಾ ಕ್ಯಾಂಟೀನ್' ಪ್ರಾರಂಭಗೊಳ್ಳಲಿದ್ದು,  ರಾಜ್ಯದ ಎಲ್ಲ ಪ್ರದೇಶಗಳಲ್ಲೂ ಬಡವರು, ಶ್ರಮಿಕರು ಕೇವಲ 5 ರು.ಗೆ ತಿಂಡಿ ಹಾಗೂ 10 ರು.ಗೆ ಭೋಜನ ಸವಿಯಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೇಡಂ(ಡಿ.17): ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಜನವರಿ 1ರಿಂದ `ಇಂದಿರಾ ಕ್ಯಾಂಟೀನ್' ಪ್ರಾರಂಭಗೊಳ್ಳಲಿದ್ದು, ರಾಜ್ಯದ ಎಲ್ಲ ಪ್ರದೇಶಗಳಲ್ಲೂ ಬಡವರು, ಶ್ರಮಿಕರು ಕೇವಲ 5 ರು.ಗೆ ತಿಂಡಿ ಹಾಗೂ 10 ರು.ಗೆ ಭೋಜನ ಸವಿಯಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನಲ್ಲಿ ಸುವರ್ಣ ಕರ್ನಾಟಕ ಭವನ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಶಂಕುಸ್ಥಾಪನೆ ಮಾಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರದ ಯೋಜನೆಗಳು ಚುನಾವಣೆಗಾಗಿ ಅಲ್ಲ. ನಮ್ಮ ಸರ್ಕಾರದ ಪ್ರಾರಂಭವಾದ ದಿನದಿಂದಲೂ ಇಲ್ಲಿಯವರೆಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸತತವಾಗಿ ನಡೆಸುತ್ತಾ ಬಂದಿದೆ ಎಂದು ಅವರು ಹೇಳಿದರು.

ನಾನು 2013ರ ಮೇ 13ರಂದು ಪ್ರಮಾಣ ವಚನ ಸ್ವೀಕರಿಸಿದ ಅರ್ಧ ಗಂಟೆಯಲ್ಲಿ ಅನ್ನಭಾಗ್ಯ, ಕ್ಷೀರಭಾಗ್ಯ ಒಳಗೊಂಡು ಆರು ಕಾರ್ಯಕ್ರಮಗಳಿಗೆ ಚಾಲನೆ ನೀಡಿದೆ. ಇಲ್ಲಿಯವರೆಗೂ ನಾವು ನುಡಿದಂತೆ ನಡೆದಿದ್ದೇವೆ ಎಂದರು.