ನವದೆಹಲಿ[ಜು.05]: ಮಾಜಿ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಭಾಗಿಯಾಗಿದ್ದಾರೆಂದು ಆರೋಪಿಸಲಾದ ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾಫಿ ಸಾಕ್ಷಿಯಾಗಲು, ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ನಿರ್ಧರಿಸಿದ್ದಾರೆ. ಅವರ ಈ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಕೂಡಾ ಮಾನ್ಯ ಮಾಡಿದೆ.

ಇದು ಮುಂದಿನ ದಿನಗಳಲ್ಲಿ ಚಿದಂಬರಂ ಮತ್ತು ಕಾರ್ತಿಗೆ ಸಂಕಷ್ಟ ತರುವ ಸಾಧ್ಯತೆ ಇದೆ. ಇಂದ್ರಾಣಿ ಅವರ ಈ ನಿರ್ಧಾರದಿಂದಾಗಿ, ಪ್ರಕರಣ ಶೀಘ್ರವೇ ತಾರ್ಕಿಕ ಅಂತ್ಯ ಕಾಣುವ ವಿಶ್ವಾಸವನ್ನು, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ವ್ಯಕ್ತಪಡಿಸಿದೆ.

ಸದ್ಯ, ಇಂದ್ರಾಣಿ ಮುಖರ್ಜಿ ಪುತ್ರಿ ಶೀನಾ ಹತ್ಯೆ ಪ್ರಕರಣದ ಆರೋಪದ ಮೇಲೆ ಮುಂಬೈನ ಬೈಕುಲ್ಲಾ ಜೈಲಿನಲ್ಲಿದ್ದಾರೆ.