ಉದ್ಯಮವಲ್ಲದೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಕಲೆಯ ಬಗ್ಗೆ ಅಪಾರ ಆಸಕ್ತಿ ಹೋಂದಿದ್ದ ಖೋಡೆ ಯಜಮಾನ್ ಎಂಟರ್ ಪ್ರೈಸಸ್ ಬ್ಯಾನರ್'ನಡಿಯಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಸಂತ ಶಿಶುನಾಳ ಷರೀಫ, ಮೈಸೂರು ಮಲ್ಲಿಗೆ ಹಾಗೂ ರಾಜ್ಯ ಪ್ರಶಸ್ತಿ ಪಡೆದ ನಾಗಮಂಡಲ ಚಿತ್ರವನ್ನು ನಿರ್ಮಿಸಿದ್ದರು.

ಬೆಂಗಳೂರು(ಅ.31): ಖ್ಯಾತ ಉದ್ಯಮಿ,ಕನ್ನಡ ಚಲನಚಿತ್ರ ನಿರ್ಮಾಪಕರಾದ ಶ್ರೀಹರಿ ಖೋಡೆ(78) ಇಂದು ಸಂಜೆ 8.30ಕ್ಕೆ ನಿಧನರಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಖೋಡೇಸ್ ಗ್ರೂಪ್ ಆಫ್ ಇಂಡಸ್ಟ್ರೀಸ್'ನ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕದ್ದರು. ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯ ಹಿನ್ನಲೆಯಲ್ಲಿ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉದ್ಯಮವಲ್ಲದೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಕಲೆಯ ಬಗ್ಗೆ ಅಪಾರ ಆಸಕ್ತಿ ಹೋಂದಿದ್ದ ಖೋಡೆ ಯಜಮಾನ್ ಎಂಟರ್ ಪ್ರೈಸಸ್ ಬ್ಯಾನರ್'ನಡಿಯಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಸಂತ ಶಿಶುನಾಳ ಷರೀಫ, ಮೈಸೂರು ಮಲ್ಲಿಗೆ ಹಾಗೂ ರಾಜ್ಯ ಪ್ರಶಸ್ತಿ ಪಡೆದ ನಾಗಮಂಡಲ ಚಿತ್ರವನ್ನು ನಿರ್ಮಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಮಾಜಿ ಮುಖ್ಯಮಂತ್ರಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಇವರ ಅಂತ್ಯ ಸಂಸ್ಕಾರ ನಾಳೆ ಮಧ್ಯಾಹ್ನ ಕೋಣನಕುಂಟೆ ಬಳಿಯಿರುವ ಖೋಡೇಸ್ ಮಹಲ್'ನಲ್ಲಿ ನೆರವೇರಲಿದೆ. ನಿರ್ದೇಶಕ ನಾಗಭರಣ ಸೇರಿದಂತೆ ಚಿತ್ರರಂಗ, ರಾಜಕೀಯ ಹಾಗೂ ಹಲವು ಉದ್ಯಮಿಗಳು ಖೋಡೆಯವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮೃತರು ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.