ನವದೆಹಲಿ(ಅ.05): ಪಾಕಿಸ್ತಾನ ಮಾಧ್ಯಮಗಳಲ್ಲಿ ಹೀರೋ ಆಗಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮೇಲೆ ಕೆಲವರು ಮಸಿ ಎರಚಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿನ್ನೆ ರಾತ್ರಿ ಅರವಿಂದ್‌ ಕೇಜ್ರಿವಾಲ್‌ ರಾಜಸ್ತಾನದ ಬಿಕಾನೇರ್‌ಗೆ ಭೇಟಿ ನೀಡದ ಸಂದರ್ಭದಲ್ಲಿ ಅವರ ಮೇಲೆ ಕೆಲ ವ್ಯಕ್ತಿಗಳು ಮಸಿ ಎರಚಿದ್ದಾರೆ. ಈ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಇದಕ್ಕೆ ಟ್ವೀಟ್ ಮಾಡಿರುವ ದೆಹಲಿ ಸಿಎಂ, ನನ್ನ ಮೇಲೆ ಮಸಿ ಎರಚಿದ್ದವರನ್ನು ಆ ದೇವರು ಚೆನ್ನಾಗಿಟ್ಟಿರಲಿ. ಅವರಿಗೆ ಒಳ್ಳೆದಾಗಲಿ ಎಂದು ಹೇಳಿದ್ದಾರೆ.

ಅರವಿಂದ್‌ ಕೇಜ್ರಿವಾಲ್‌, ಭಾರತೀಯ ಸೇನೆ ಪಾಕಿಸ್ತಾನದ ಸೇನಾ ನೆಲೆಗಳ ಮೇಲೆ ಸರ್ಜಿಕಲ್ ಸ್ಟ್ರೈಕ್‌ ನಡೆಸಿದ್ದಕ್ಕೆ ಪುರಾವೆ ಒದಗಿಸಬೇಕೆಂದು ಪ್ರಧಾನಿ ಅವರನ್ನು ಒತ್ತಾಯಿಸಿದ್ದರು. ಕೇಜ್ರಿವಾಲ್‌ ಅವರ ಈ ನಡೆಗೆ ದೇಶಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.

Scroll to load tweet…