ತೀವ್ರ ವಿರೋಧದ ಮಧ್ಯೆಯೇ ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.
ಮಡಿಕೇರಿ (ನ.09): ತೀವ್ರ ವಿರೋಧದ ಮಧ್ಯೆಯೇ ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.
ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು ಎಂದು ಕೊಡಗು ಡಿಸಿ ಮತ್ತು ಎಸ್ಪಿ ಜಂಟಿ ಸುದ್ದಿಗೋಷ್ಠಿ ನಡೆಸಿ, ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಮಡಿಕೇರಿಯಲ್ಲಿ ನ. 10 ರಂದು 10 ಗಂಟೆಗೆ ಜಯಂತಿ ಆಚರಿಸಲಾಗುತ್ತದೆ. ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ ಟಿಪ್ಪು ಜಯಂತಿ ಆಚರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಶಾಂತಿ ಸಭೆ ನಡೆಸಿದ್ದು, ಶಾಲೆ ಕಾಲೇಜಿಗೆ ರಜೆ ಘೋಷಿಸಿಲ್ಲ. ಜಿಲ್ಲಾದ್ಯಂತ ನಿಷೇಧಾಜ್ಞೆ ಹೇರಲಾಗಿದೆ. ಕೊಡಗು ಜಿಲ್ಲೆಯ 3 ಅಂತರ್ ರಾಜ್ಯ ಹಾಗೂ 7 ಅಂತರ್ ಜಿಲ್ಲೆಯ ಚೆಕ್ ಪೋಸ್ಟ್'ಗಳಲ್ಲಿ ತಲಾ 4 ಸಿಸಿ ಕ್ಯಾಮೆರಾ, ಕೊಡಗು ಜಿಲ್ಲೆಯ ಸೂಕ್ಷ್ಮ ಪ್ರದೇಶದಲ್ಲಿ 240 ಸಿಸಿ ಕ್ಯಾಮೆರಾ, 3 ಡ್ರೋನ್, ಪೊಲೀಸ್ ಹಾಗೂ ಖಾಸಗಿ ಸೇರಿ 30 ವೀಡಿಯೋ ಗ್ರಾಫರ್ ಬಳಸಿ ನಿಗಾವಹಿಸಲಾಗುತ್ತಿದೆ ಎಂದು ತಿಳಿಸಿದರು. ಇದರ ಮಧ್ಯೆ ನಿನ್ನೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳಿಂದ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಲಾಯಿತು.
