ಭಾರತೀಯ ಗೂಢಾಚಾರಿ ಎಂಬ ಆರೋಪದ ಮೇರೆಗೆ ಭಾರತೀಯ ಕುಲಭೂಷಣ್ ಜಾಧವ್ ಅವರ ಮೇಲೆ ಪಾಕಿಸ್ತಾನ ನ್ಯಾಯಾಲಯ ವಿಧಿಸಿರುವ ಗಲ್ಲು ಶಿಕ್ಷೆಗೆ ಹಾಲೆಂಡ್'ನ ಹೇಗ್ 'ಕುಲಭೂಷಣ್ ಜಾಧವ್ ವಿರುದ್ಧ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯ ನೀಡಿರುವ ಮರಣ ದಂಡನೆ ತೀರ್ಪಿನ ವಿರುದ್ಧ ಭಾರತ ಸರ್ಕಾರ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಸದ್ಯದ ಮಟ್ಟಿಗೆ ಮರಣ ದಂಡನೆ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ಈ ಕುರಿತಂತೆ, ಪಾಕಿಸ್ತಾನ ಪ್ರಧಾನ ಮಂತ್ರಿ ನವಾಜ್ ಷರೀಫ್ ಅವರಿಗೂ ನ್ಯಾಯಾಲಯ ಪತ್ರ ರವಾನಿಸಿದೆ.
ನವದೆಹಲಿ(ಮೇ.10): ಭಾರತೀಯ ಗೂಢಾಚಾರಿ ಎಂಬ ಆರೋಪದ ಮೇರೆಗೆ ಭಾರತೀಯ ಕುಲಭೂಷಣ್ ಜಾಧವ್ ಅವರ ಮೇಲೆ ಪಾಕಿಸ್ತಾನ ನ್ಯಾಯಾಲಯ ವಿಧಿಸಿರುವ ಗಲ್ಲು ಶಿಕ್ಷೆಗೆ ಹಾಲೆಂಡ್'ನ ಹೇಗ್ 'ಕುಲಭೂಷಣ್ ಜಾಧವ್ ವಿರುದ್ಧ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯ ನೀಡಿರುವ ಮರಣ ದಂಡನೆ ತೀರ್ಪಿನ ವಿರುದ್ಧ ಭಾರತ ಸರ್ಕಾರ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಸದ್ಯದ ಮಟ್ಟಿಗೆ ಮರಣ ದಂಡನೆ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ಈ ಕುರಿತಂತೆ, ಪಾಕಿಸ್ತಾನ ಪ್ರಧಾನ ಮಂತ್ರಿ ನವಾಜ್ ಷರೀಫ್ ಅವರಿಗೂ ನ್ಯಾಯಾಲಯ ಪತ್ರ ರವಾನಿಸಿದೆ.
ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಯೂ ಆಗಿರುವ ಕುಲಭೂಷಣ್ ಜಾಧವ್ ಅವರನ್ನು ಕಳೆದ ವರ್ಷ ಮಾರ್ಚ್ ನಲ್ಲಿ ಪಾಕಿಸ್ತಾನ ದ ಕರಾಚಿಯಲ್ಲಿ ಅಲ್ಲಿನ ಭದ್ರತಾ ಪಡೆಗಳು ಬಂಧಿಸಿದ್ದವು. ಆಗಿನಿಂದ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯದಲ್ಲಿ ಜಾಧವ್ ವಿರುದ್ಧ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಕಳೆದ ತಿಂಗಳ 10ರಂದು ನ್ಯಾಯಾಲಯ ಜಾಧವ್ ಅವರಿಗೆ ಕರಾಚಿ ಹಾಗೂ ಬಲೂಚಿಸ್ತಾನದ ಪ್ರಾಂತ್ಯದಲ್ಲಿ ಗೂಢಚರ್ಯೆ ನಡೆಸಿದ ಆರೋಪದ ಮೇರೆಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಿರುವ ಕುರಿತು ಕುಲಭೂಷಣ್ ಕುಟಂಬದವರ ಜೊತೆ ಮಾತನಾಡಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.
