ಮಂಗಳೂರು[ಆ.27]: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಸಾವಿನ ಕುರಿತಂತೆ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್‌ಎಸ್‌ಎಲ್‌) ವರದಿಯಲ್ಲಿ ಆತ್ಮಹತ್ಯೆ ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ಧಾರ್ಥ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಪ್ರಕರಣದ ತನಿಖಾಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಸಿದ್ಧಾರ್ಥ ಸಾವಿನ ರಹಸ್ಯವೇನು?: ವಿಧಿವಿಜ್ಞಾನ ವರದಿ ಬಹಿರಂಗ

ವಿಧಿ ವಿಜ್ಞಾನ ಪ್ರಯೋಗಾಲಯದ ತನಿಖಾ ವರದಿ ಫೋರೆನ್ಸಿಕ್‌ ತಜ್ಞರಿಂದ ಪ್ರಕರಣದ ತನಿಖಾಧಿಕಾರಿಗೆ ಶುಕ್ರವಾರ ಸಲ್ಲಿಕೆಯಾಗಿತ್ತು. ಬಹಳ ಕುತೂಹಲ ಹಾಗೂ ಅನುಮಾನಗಳಿಗೆ ಎಡೆಮಾಡಿದ ಸಿದ್ಧಾರ್ಥ ಕೈಬರಹದ ಪರೀಕ್ಷಾ ವರದಿ ಕೂಡ ತನಿಖಾಧಿಕಾರಿಗಳ ಕೈಸೇರಿದೆ.

ಇದರಿಂದಾಗಿ ಈಗ ಸಿದ್ಧಾರ್ಥ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖಾಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.