ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಉತ್ತೇಜನಕ್ಕಾಗಿ ಸದ್ಯದಲ್ಲಿಯೇ ಹೂಡಿಕೆದಾರರ ಸಮಾವೇಶ ಮಾಡಲಾಗುವುದು ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದ್ದಾರೆ.
ಧಾರವಾಡ: ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಉತ್ತೇಜನಕ್ಕಾಗಿ ಸದ್ಯದಲ್ಲಿಯೇ ಹೂಡಿಕೆದಾರರ ಸಮಾವೇಶ ಮಾಡಲಾಗುವುದು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಈಗಾಗಲೇ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ್ದು, ಯಶಸ್ವಿಯಾಗಿದೆ. ಅದರ ಫಲವಾಗಿ ತುಮಕೂರು, ಮೈಸೂರು, ಕಲಬುರಗಿ, ಯಾದಗಿರಿ, ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ಕೈಗಾರಿಕಾ ಕಂಪನಿಗಳು ಬರುತ್ತಿವೆ. ಮುಂದಿನ ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನಿರ್ಮಾಣಕ್ಕೆ ಹೂಡಿಕೆದಾರರ ಸಮಾವೇಶದ ಸಿದ್ಧತೆ ನಡೆಸುತ್ತಿದ್ದೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.
