ನವದೆಹಲಿ[ಆ.10]: ಕರ್ನಾಟಕದ ನಿದ್ರೆಗೆಡಿಸಿದ್ದ ಕುಖ್ಯಾತ ನರಹಂತಕ ವೀರಪ್ಪನ್‌ನನ್ನು 2004ರಲ್ಲಿ ಹತ್ಯೆಗೈದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌)ಯ ಮುಖ್ಯಸ್ಥರಾಗಿದ್ದ ಐಪಿಎಸ್‌ ಅಧಿಕಾರಿ ವಿಜಯ ಕುಮಾರ್‌ ಜಮ್ಮು-ಕಾಶ್ಮೀರದ ಉಪರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ ಎಂಬ ವದಂತಿ ಹಬ್ಬಿದೆ.

2018ರಿಂದ ಜಮ್ಮು-ಕಾಶ್ಮೀರ ರಾಜ್ಯಪಾಲರ ಸಲಹೆಗಾರರಾಗಿ ವಿಜಯಕುಮಾರ್‌ ಕಾರ್ಯನಿರ್ವಹಿಸುತ್ತಿದ್ದಾರೆ. 1975ನೇ ಬ್ಯಾಚಿನ ತಮಿಳುನಾಡು ಕೇಡರ್‌ ಅಧಿಕಾರಿಯಾಗಿರುವ ಅವರು ಈಗಾಗಲೇ ಸೇವೆಯಿಂದ ನಿವೃತ್ತರಾಗಿದ್ದಾರೆ.