ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರಾಭವಗೊಂಡಿದ್ದು, ಈ ಘಟನೆಯ ಬಳಿಕ ಮಂಡ್ಯ ಮತದಾರರ ವಿರುದ್ಧ ಸಚಿವ ಡಿ.ಸಿ ತಮ್ಮಣ್ಣ ನಿರಂತರವಾಗಿ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. 
ಶುಕ್ರವಾರ ಮದ್ದೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ವೇಳೆ ಸಮಸ್ಯೆ ಹೇಳಿಕೊಳ್ಳಲು ಬಂದ ಜನರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಜೋಡೆತ್ತುಗಳು ಇಲ್ಲಿಗೆ ಬರುತ್ತವೆ ಅವರ ಬಳಿ ಹೇಳಿಕೊಳ್ಳಿ ಎಂದು ಪರೋಕ್ಷವಾಗಿ ದರ್ಶನ್ ಹಾಗೂ ಯಶ್ ಬಗ್ಗೆ ಹೇಳಿದ್ದಾರೆ. ಅಲ್ಲದೇ ಚುನಾವಣೆ ಸಂದರ್ಭದಲ್ಲಿ ಮತ ನೀಡದೇ ಈಗ ತಮ್ಮ ಬಳಿ ಬಂದು ಸಮಸ್ಯೆ ಹೇಳಿಕೊಳ್ಳುವುದೇಕೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ. 

ನಾನು ಅಭಿವೃದ್ಧಿ ಪರವಾಗಿ ಕೆಲಸ ಮಾಡಿದ್ದೇನೆ. ನೀವು ಅದನ್ನು ನೆನೆಸಿಕೊಳ್ಳಲಿಲ್ಲ. ಈಗ ಬಂದು ಮಾತನಾಡುತ್ತೀರಾ ಎಂದು ಮತದಾರರ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಮಾತನಾಡಿದ್ದಾರೆ.