ಈ ಬಗ್ಗೆ ಸ್ವತಃ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಕೃಷ್ಣಸಿಂಗ್ ಸುವರ್ಣ ನ್ಯೂಸ್'ಗೆ ಸ್ಪಷ್ಟಪಡಿಸಿದ್ದಾರೆ.
ಧರ್ಮಸ್ಥಳ(ಅ.10): ಮಂಜುನಾಥ ದರ್ಶನಕ್ಕೆಂದು ಧರ್ಮಸ್ಥಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಅಪಚಾರವೆಸಗಿದ್ದಾರೆಂದು ವದಂತಿ ಹಬ್ಬಿದೆ.
ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಅವರು ಶೂ ಧರಿಸಿದ್ದರೆಂದು ವದಂತಿ ಹಬ್ಬಿದ್ದು, ಈ ಬಗ್ಗೆ ಸ್ವತಃ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಕೃಷ್ಣಸಿಂಗ್ ಸುವರ್ಣ ನ್ಯೂಸ್'ಗೆ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಮೋದಿಯವರು ದೇಗುಲದಲ್ಲಿ ಯಾವುದೇ ರೀತಿಯಲ್ಲಿ ಅಪಚಾರವೆಸಗಿಲ್ಲ. ತಮ್ಮ ಪಾದರಕ್ಷೆಗಳನ್ನು ಹೊರ ಗೆ ಬಿಟ್ಟು ಧಾರ್ಮಿಕ ಸಂಪ್ರದಾಯದಂತೆ ಪ್ರಧಾನಿಯವರು ದರ್ಶನ ಪಡೆದಿದ್ದಾರೆ' ಎಂದು ತಿಳಿಸಿದ್ದಾರೆ.
ಮೊದಲ ಬಾರಿಗೆ ಧರ್ಮಸ್ಥಳ ಭೇಟಿ : ಶ್ರೀಕ್ಷೇತ್ರ ಧರ್ಮಸ್ಥಳದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪ್ರಧಾನಮಂತ್ರಿಯೊಬ್ಬರು ಮಂಜುನಾಥನ ದರ್ಶನ ಪಡೆದಿದ್ದಾರೆ.
