ಸೋಮವಾರ ವಿಚಾರಣೆ ವೇಳೆ ಡಿ.ಕೆ. ಶಿವಕುಮಾರ್ ನೀಡಿದ್ದ ಉತ್ತರಗಳಿಗೆ ಸಮಾಧಾನಗೊಳ್ಳದ ಅಧಿಕಾರಿಗಳು ಮತ್ತಷ್ಟು ಪ್ರಶ್ನೆಗಳನ್ನು ಸಿದ್ದಪಡಿಕೊಂಡು ವಿಚಾರಣೆಗೆ ತಯಾರಿ ನಡೆಸಿಕೊಂಡಿದ್ದಾರೆ.
ಬೆಂಗಳೂರು(ಆ.09): ಐಟಿ ದಾಳಿಯ ಸುಳಿಯಲ್ಲಿ ಸಿಲುಕಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ಗೆ ಮತ್ತೊಂದು ನೋಟಿಸ್ ಜಾರಿಯಾಗಿದೆ. ಡಿಕೆಶಿ ನೀಡಿದ್ದ ಉತ್ತರಕ್ಕೆ ಸಮಾಧಾನಗೊಳ್ಳದ ಐಟಿ ಅಧಿಕಾರಿಗಳು ಮತ್ತೆ ಬುಲಾವ್ ನೀಡಿದ್ದಾರೆ. ನಿನ್ನೆ ನೋಟಿಸ್ ಜಾರಿ ಮಾಡಿದ್ದು 2 ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಿದ್ದಾರೆ. ಹೀಗಾಗಿ ನಾಳೆ ಐಟಿ ಅಧಿಕಾರಿಗಳ ಮುಂದೆ ಹಾಜರಾಗಲೇ ಬೇಕಾದ ಅನಿವಾರ್ಯತೆ ಡಿಕೆಶಿಗೆ ಎದುರಾಗಿದೆ.
ಸೋಮವಾರ ವಿಚಾರಣೆ ವೇಳೆ ಡಿ.ಕೆ. ಶಿವಕುಮಾರ್ ನೀಡಿದ್ದ ಉತ್ತರಗಳಿಗೆ ಸಮಾಧಾನಗೊಳ್ಳದ ಅಧಿಕಾರಿಗಳು ಮತ್ತಷ್ಟು ಪ್ರಶ್ನೆಗಳನ್ನು ಸಿದ್ದಪಡಿಕೊಂಡು ವಿಚಾರಣೆಗೆ ತಯಾರಿ ನಡೆಸಿಕೊಂಡಿದ್ದಾರೆ. ನಾಳೆ ಡಿ.ಕೆ.ಶಿವಕುಮಾರ್ ಜೊತೆ ಡಿಕೆಶಿ ಮಾವ ತಮ್ಮಯ್ಯ ಹಾಗೂ ಶರ್ಮಾ ಟ್ರಾವೆಲ್ಸ್ ಮಾಲೀಕ ಸುನಿಲ್ ಶರ್ಮಾ ಕೂಡ ಹಾಜರಾಗುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಮನೆ ಹಾಗೂ ಇತರೆಡೆ ದಾಳಿ ವೇಳೆ 300 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಅಲ್ಲದೆ, 15 ಕೋಟಿ ರೂ ನಗದು ಹಾಗೂ ಚಿನ್ನಾಭರಣ ವಶಕ್ಕೆ ಪಡೆಯಾಲಾಗಿದೆ. ಹೀಗಾಗಿ ಡಿ.ಕೆ.ಶಿವಕುಮಾರ್, ಪತ್ನಿ ಉಷಾ ಶಿವಕುಮಾರ್ ಹಾಗೂ ಮಕ್ಕಳ ಬ್ಯಾಂಕ್ ಅಕೌಂಟ್ಗಳನ್ನು ಸೀಜ್ ಮಾಡಲಾಗಿದೆ.
