ಬೆಂಗಳೂರು (ಸೆ.19): ಸಿಎಂಸಿ ಆದೇಶದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಆದೇಶದಿಂದ ರೈತರಿಗೆ ತುಂಬಾ ತೊಂದರೆ ಆಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸುವರ್ಣನ್ಯೂಸ್‌ ಗೆ ಹೇಳಿಕೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಮ್ಮಲ್ಲಿ ಕುಡಿಯಲೂ ನೀರಿಲ್ಲ. ಆದರೂ ನೀರು ಬಿಡುಗಡೆಗೆ ಆದೇಶಿಸಿದ್ದಾರೆ ಇಂದಿನ ಪರಿಸ್ಥಿತಿ ನೋಡಿದರೆ ಸರ್ಕಾರ ಬಿಸ್ಲೆರಿ ಭಾಗ್ಯ ಮತ್ತು ಟಿಶ್ಯು ಭಾಗ್ಯ ನೀಡಬೇಕಾಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.

ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಕಾವೇರಿ ಮೇಲುಸ್ತುವಾರಿ ಸಮಿತಿ ಆದೇಶದಿಂದ ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಕಾವೇರಿ ಮೇಲುಸ್ತುವಾರಿ ಸಭೆ ಖಂಡಿಸಿ ರೈತರು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗಿಳಿದಿವೆ.

ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸಾರ್ವಜನಿಕರಿಂದ ರಸ್ತೆ ತಡೆ ನಡೆಸಲಾಗುತ್ತಿದೆ. ಬೆಂಗಳೂರು - ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.