ಪರಮೇಶ್ವರ್ ಆಪ್ತ, ಕಾಂಗ್ರೆಸ್ ಶಾಸಕನ ಕಚೇರಿ ಮೇಲೆ ಐಟಿ ದಾಳಿ

First Published 8, Mar 2018, 2:38 PM IST
IT Raid on Congress MLA Office
Highlights

ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಸುವರ್ಣ ನ್ಯೂಸ್'ಗೆ ರಘು ಆಚಾರ್ ಆಪ್ತ ಮೂಲಗಳಿಂದ ಮಾಹಿತಿ ದೊರೆತಿದೆ.

ಬೆಂಗಳೂರು(ಮಾ.08): ಕಾಂಗ್ರೆಸ್'ನ ವಿಧಾನ ಪರಿಷತ್'ನ ಸದಸ್ಯ ರಘು ಆಚಾರ್ ಅವರ ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಖಲೆ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ದೆಹಲಿಯಿಂದ ಬಂದ ಅಧಿಕಾರಿಗಳ ತಂಡ ಬೆಂಗಳೂರು ಹೊರವಲಯದ ಸರ್ಜಾಪುರದಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಸುವರ್ಣ ನ್ಯೂಸ್'ಗೆ ರಘು ಆಚಾರ್ ಆಪ್ತ ಮೂಲಗಳಿಂದ ಮಾಹಿತಿ ದೊರೆತಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿರುವ ರಘು ಆಚಾರ್ ನಿವಾಸ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಯುತ್ತಿದೆ. ಆಚಾರ್ ಅವರು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ.

 

loader