ಕಾಂಗ್ರೆಸ್ ನಾಯಕರಿಗೆ ಬೆಳ್ಳಂ ಬೆಳಿಗ್ಗೆ ಐಟಿ ಶಾಕ್ ತಗುಲಿದೆ. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಮನೆ ಹಾಗೂ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿಯವರ ಬೆಂಗಳೂರಿನ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರು(ಜ.19): ಕಾಂಗ್ರೆಸ್ ನಾಯಕರಿಗೆ ಬೆಳ್ಳಂ ಬೆಳಿಗ್ಗೆ ಐಟಿ ಶಾಕ್ ತಗುಲಿದೆ. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಮನೆ ಹಾಗೂ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿಯವರ ಬೆಂಗಳೂರಿನ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳ್ಳಂ ಬೆಳಿಗ್ಗೆ ಎರಡು ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಮನೆಯಲ್ಲಿದ್ದ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ದಾಳಿಯನ್ನು ಗೋವಾ ಘಟಕದ ಅಧಿಕಾರಿಗಳು ನಡೆಸಿದ್ದು, ಇದಕ್ಕೆ ಬೆಂಗಳೂರಿನ ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಇಷ್ಟೇ ಅಲ್ಲದೆ ಗೋಕಾಕ್'ನಲ್ಲಿರುವ ರಮೇಶ್ ಜಾರಕಿಹೊಳಿಯ ಆಪ್ತರ 4 ಮನೆಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ದಾಳಿ ನೋಟ್ ವಿಚಾರಕ್ಕೆ ಸಂಬಂಧಪಟ್ಟದಲ್ಲ, ಬದಲಾಗಿ ಆದಾಯ ತೆರಿಗೆ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.