ಸ್ಯಾಂಡಲ್‌ವುಡ್ ಸ್ಟಾರ್ ನಟ, ನಿರ್ಮಾಪಕರಿಗೆ ಐಟಿ ಅಧಿಕಾರಿಗಳು ಕೊಟ್ರು ಶಾಕ್ ! 11 ಕಡೆ ಏಕಕಾಲದಲ್ಲಿ ದಾಳಿ | ಯಾರ್ಯಾರ ಮನೆ ಮೇಲೆ ದಾಳಿ ನಡೆಯಿತು? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು (ಜ.03): ಸ್ಯಾಂಡಲ್ವುಡ್ ನಟ, ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಇಂದು ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟಿದ್ದಾರೆ ಐಟಿ ಅಧಿಕಾರಿಗಳು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಟ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. 

ಸದಾಶಿವನಗರದ ಪುನೀತ್ ರಾಜ್ ಕುಮಾರ್ ನಿವಾಸ, ನಾಗವಾರದಲ್ಲಿರುವ ಶಿವರಾಜ್ ಕುಮಾರ್ ನಿವಾಸ, ಮಹಾಲಕ್ಷ್ಮಿ ಲೇಔಟ್‌ನ ನಾಗಪುರದ ರಾಕ್ ಲೈನ್ ವೆಂಕಟೇಶ್ ನಿವಾಸ, ನಾಗರಬಾವಿಯ ವಿಜಯ್ ಕಿರಗಂದೂರು ನಿವಾಸ ಹಾಗೂ ಎಚ್ಎಸ್ಆರ್ ಲೇಔಟ್ ನಲ್ಲಿರುವ ಮನೋಹರ್ ನಿವಾಸದ ಮೇಲೆ ದಾಳಿ ನಡೆದಿದೆ. ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.