ಧನಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕ ಉಮಾಶಂಕರ್ ಹಾಗೂ ಹಿರಿಯ ಐಎಎಸ್ ಅಕಾರಿಯೊಬ್ಬ ಅವರ ಮನೆ ಹಾಗೂ ಕಚೇರಿಗಳ ಮೇಲೂ ಐಟಿ ಅಕಾರಿಗಳು ದಾಳಿ ನಡೆಸಿದ್ದು, ಕೆಲ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು(ನ.30): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಎನ್ನಲಾದ ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ಚಿಕ್ಕರಾಯಪ್ಪ ಸೇರಿ ನಾಲ್ವರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಕಾರಿಗಳು ಬುಧವಾರ ದಾಳಿ ನಡೆಸಿ ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಧನಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕ ಉಮಾಶಂಕರ್ ಹಾಗೂ ಹಿರಿಯ ಐಎಎಸ್ ಅಕಾರಿಯೊಬ್ಬ ಅವರ ಮನೆ ಹಾಗೂ ಕಚೇರಿಗಳ ಮೇಲೂ ಐಟಿ ಅಕಾರಿಗಳು ದಾಳಿ ನಡೆಸಿದ್ದು, ಕೆಲ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಕಪ್ಪು ಹಣ ಹಾಗೂ ಅಕ್ರಮ ಆಸ್ತಿಯ ಆರೋಪದ ಮಾಹಿತಿ ಆಧರಿಸಿ ಐಟಿ ಅಕಾರಿಗಳು ಸಂಜಯನಗರ, ಬಾಣಸವಾಡಿಯಲ್ಲಿರುವ ಮನೆ ಹಾಗೂ ಕಚೇರಿಗಳ ದಾಳಿ ನಡೆಸಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೂ ದಾಖಲೆಗಳ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
