ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್’ನ ಕೆಲ ನಾಯಕರ ಮೇಲೆ ಐಟಿ ದಾಳಿ ನಡೆದಿರುವುದರ ಬಗ್ಗೆ ನಮಗೆ ಯಾವುದೇ ವರದಿ ಬಂದಿಲ್ಲ. ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ್ದಾರೆ. ವರದಿ ಬಂದ ನಂತರ ಈ ಬಗ್ಗೆ ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು ಎಂದರು.

ಚಿಕ್ಕಮಗಳೂರು (ಜ. 26): ಐಟಿ ಇಲಾಖೆ ಇತ್ತೀಚೆಗೆ ಕಾಂಗ್ರೆಸ್’ನ ಬಹುತೇಕ ನಾಯಕರ ಮೇಲೆ ದಾಳಿ ನಡೆಸುತ್ತಿರುವುದನ್ನು ಗಮನಿಸಿದರೆ ಅದು ಕೇಂದ್ರದ ಮೂಗಿನ ನೇರಕ್ಕೆ ನಡೆದುಕೊಳ್ಳುತ್ತಿದೆ ಎಂಬ ಅನುಮಾನ ಬರುವುದು ಸಹಜ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್’ನ ಕೆಲ ನಾಯಕರ ಮೇಲೆ ಐಟಿ ದಾಳಿ ನಡೆದಿರುವುದರ ಬಗ್ಗೆ ನಮಗೆ ಯಾವುದೇ ವರದಿ ಬಂದಿಲ್ಲ. ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ್ದಾರೆ. ವರದಿ ಬಂದ ನಂತರ ಈ ಬಗ್ಗೆ ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು ಎಂದರು.

ಇದೇ ವೇಳೆ ಬಿಜೆಪಿಯಿಂದ ಕೆಲ ನಾಯಕರು ಕಾಂಗ್ರೆಸ್ ಬರುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇತ್ತೀಚೆಗೆ ಬಿಜೆಪಿಯಲ್ಲಾಗುತ್ತಿರುವ ಸಾಕಷ್ಟು ವಿದ್ಯಮಾನಗಳನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಸಾಕಷ್ಟು ನಾಯಕರು ಕಾಂಗ್ರೆಸ್’ಗೆ ಬರುವ ಲಕ್ಷಣಗಳಿವೆ ಎಂದಿದ್ದಾರೆ.