ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್. ಯಡಿಯೂರಪಪ್ಪ ಮಾಡಿರುವ ಆರೋಪಗಳನ್ನು ಸಚಿವ ರಾಯರೆಡ್ಡಿ ಖಂಡಿಸಿದ್ದಾರೆ. ವಿಧಾನಸೌಧದಲ್ಲಿ ಮಾದ್ಯಮಗಳನ್ನುದ್ದೇಶಿಸಿ ಮಾತನಾಡಿದ  ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಸಿಎಂ ಸಿದ್ದರಾಮಯ್ಯ ಲಿಂಗಾಯತ, ವೀರಶೈವ ಧರ್ಮವನ್ನು ಒಡೆಯಲು ಹೊರಟಿಲ್ಲ ಎಂದಿದ್ದಾರೆ

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್. ಯಡಿಯೂರಪಪ್ಪ ಮಾಡಿರುವ ಆರೋಪಗಳನ್ನು ಸಚಿವ ರಾಯರೆಡ್ಡಿ ಖಂಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾದ್ಯಮಗಳನ್ನುದ್ದೇಶಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಸಿಎಂ ಸಿದ್ದರಾಮಯ್ಯ ಲಿಂಗಾಯತ, ವೀರಶೈವ ಧರ್ಮವನ್ನು ಒಡೆಯಲು ಹೊರಟಿಲ್ಲ. ಬದಲಾಗಿ ವೀರಶೈವ ಮಹಾಸಭಾದಿಂದ ಧರ್ಮವನ್ನಾಗಿ ಮಾಡಬೇಕೆಂದು ಮನವಿ ಮಾಡಿದ್ದಾರೆ, ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಯಾವತ್ತೂ ಜಾತಿ ಒಡೆಯುವ, ಧರ್ಮದ ಬಗ್ಗೆ ಮಾತನಾಡಿಲ್ಲ. ಯಡಿಯೂರಪ್ಪ ವಿನಾಕಾರಣ ಆರೋಪ ಮಾಡುತ್ತಿರುವುದು ಸರಿಯಲ್ಲ, ಜಾತಿ, ಧರ್ಮ ಅನ್ನೋದು ಬಹಳ ಸೂಕ್ಷ್ಮ ವಿಚಾರ, ಜವಾಬ್ದಾರಿಯುತ ಸ್ಥಾನದಲ್ಲಿರೋರು ಇಂತಹ ಆರೋಪ ಮಾಡಬಾರದು ಎಂದು ರಾಯರೆಡ್ಡಿ ಹೇಳಿದ್ದಾರೆ.

ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ವಿಷಯದಲ್ಲಿ, ಸಿದ್ದರಾಮಯ್ಯ ಜಾತಿ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಆರೋಪಿಸಿದ್ದರು.

ಯಡಿಯೂರಪ್ಪ ಲಿಂಗಾಯತ ಮುಖಂಡ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಅವರು ಲಿಂಗಾಯತ ಧರ್ಮಕ್ಕೆ ವಿರೋಧ ವ್ಯಕ್ತಪಡಿಸಬಾರದು. ಬಿಎಸ್ ವೈ ಪಕ್ಕಾ ಆರೆಸ್ಸೆಸ್’ ವಾದಿ. ಬಿಜೆಪಿ ಕಚೇರಿಯಲ್ಲಿ ಬಸವಣ್ಣನ ಫೋಟೋ ಹಾಕಿದ್ದಾರೆಯೇ ? ಎಂದು ರಾಯರೆಡ್ಡಿ ಪ್ರಶ್ನಿಸಿದ್ದಾರೆ.

ಲಿಂಗಾಯತ ಮತ್ತು ವೀರಶೈವ ಧರ್ಮ ಹಿಂದುತ್ವದ ಒಂದು ಅಂಗ ಎಂದು ಯಡಿಯೂರಪ್ಪ ಹೇಳಿದ್ದಾರೆ. ಅವರಲ್ಲಿ ಹಿಂದೂ ಧರ್ಮ ಅನ್ನೋದಿಲ್ಲ. ಹಿಂದುತ್ವ ಅನ್ನೋ ಭಾವನೆ ಇದೆ, ಎಂದು ರಾಯರೆಡ್ಡಿ ಹೇಳಿದ್ದಾರೆ.