ಕರ್ನಾಟಕದ ಮನವಿಯನ್ನು ತಿರಸ್ಕರಿಸುತ್ತಾ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ದಿ. ಜಯಲಲಿತಾರವರನ್ನು ದೋಷಿ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ನವದೆಹಲಿ (ಏ.05): ಕರ್ನಾಟಕದ ಮನವಿಯನ್ನು ತಿರಸ್ಕರಿಸುತ್ತಾ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ದಿ. ಜಯಲಲಿತಾರವರನ್ನು ದೋಷಿ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಅಕ್ರಮ ಆಸ್ತಿ ಪ್ರಕರಣದಲ್ಲಿ ಎಐಡಿಎಂಕೆ ಮುಖ್ಯಸ್ಥೆಯಾಗಿದ್ದ ಜಯಲಲಿತಾರನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ, ಈಗಾಗಲೇ ನೀಡಿರುವ ಪ್ರಕರಣದ ತೀರ್ಪನ್ನು ಮರುಪರಿಶೀಲಿಸಬೇಕೆಂದು ಕಳೆದ ತಿಂಗಳು ಕರ್ನಾಟಕ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ವಿಚಾರಣಾ ಪ್ರಕ್ರಿಯೆಗಳು ಕಡಿಮೆಯಾದರೆ 100 ಕೋಟಿ ರೂಗಳನ್ನು ವಸೂಲು ಮಾಡುವುದು ಕಷ್ಟಸಾಧ್ಯವಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾರನ್ನು ಪರಪ್ಪನ ಅಗ್ರಹಾರದಲ್ಲಿ ಇಟ್ಟಿದ್ದಾಗ ಕರ್ನಾಟಕ ಸರ್ಕಾರ 100 ಕೋಟಿ ರೂ. ಖರ್ಚು ಮಾಡಿತ್ತು.
ಶಶಿಕಲಾ ಸೇರಿದಂತೆ ಇಬ್ಬರನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಜಯಲಲಿತಾ ನಿಧನದ ಹಿನ್ನೆಲೆಯಲ್ಲಿ ಅವರ ಹೆಸರನ್ನು ಕೈಬಿಡಲಾಗಿದೆ. ಅವರಿಗಾಗಿ ಖರ್ಚು ಮಾಡಿರುವ ಹಣವನ್ನು ವಾಪಸ್ ಪಡೆಯಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
