ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿ ಗೌರವಿಸಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುರಾಡಳಿತ, ದುರಹಂಕಾರದಿಂದ ನಡೆದುಕೊಂಡಿದ್ದು, ರಾಜ್ಯ ಸರ್ಕಾರದ ಲೋಪ ಮಾಡಿದಂತಾಗಿದೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು.
ಬೀದರ್: ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿ ಗೌರವಿಸಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುರಾಡಳಿತ, ದುರಹಂಕಾರದಿಂದ ನಡೆದುಕೊಂಡಿದ್ದು, ರಾಜ್ಯ ಸರ್ಕಾರದ ಲೋಪ ಮಾಡಿದಂತಾಗಿದೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು.
ನೆಹರು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಈ ದೇಶದ ಪ್ರಧಾನಿಯೊಬ್ಬರು ರಾಜ್ಯಕ್ಕೆ ಆಗಮಿಸಿ ಸರ್ಕಾರಿ ಕಾರ್ಯಕ್ರಮವನ್ನು ಉದ್ಘಾಟಿಸುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಗೌರವ ತೋರಿದ್ದಾರೆ ಎಂದರು.
ಪ್ರಧಾನಿಗೆ ಅಗೌರವ ತೋರುವುದು ಇಡೀ ದೇಶಕ್ಕೆ ಅಗೌರವ ತೋರಿದಂತೆ ಎಂದು ಹೇಳಿದ ಅವರು, ಇದನ್ನು ರಾಜ್ಯದ ಜನತೆ ಸಹಿಸಲ್ಲ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜಗದೀಶ ಶೆಟ್ಟರ್ ಎಚ್ಚರಿಸಿದರು.
