ಆಂಧ್ರ ಪ್ರದೇಶದಲ್ಲಿ ಬದಲಾದ ರಾಜಕೀಯ ಅಖಾಡ| ಮಕಾಡೆ ಮಲಗಿದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ| ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು| 175 ವಿಧಾನಸಭಾ ಕ್ಷೇತ್ರಗಳ ಪೈಕಿ 148ರಲ್ಲಿ YSR ಕಾಂಗ್ರೆಸ್ ಮುನ್ನಡೆ| ಅಧಿಕಾರ ಹಿಡಿಯುವತ್ತ ಜಗನ್ ಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್| ಕೇವಲ 24 ಕ್ಷೇತ್ರಗಳಲ್ಲಿ ಮುನ್ನಡೆ ದಾಖಲಿಸಿರುವ ಟಿಡಿಪಿ|
ಅಮರಾವತಿ(ಮೇ.23): ಆಂಧ್ರಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಟಿಡಿಪಿ ಮಕಾಡೆ ಮಲಗಿದ್ದು, ಜಗನ್ ಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಲಿದೆ.
ಒಟ್ಟು 175 ವಿಧಾನಸಭಾ ಕ್ಷೇತ್ರಗಳ ಪೈಕಿ 148 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಜಗನ್ ನೇತೃತ್ವದ YSR ಕಾಂಗ್ರೆಸ್ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.
ಅದರಂತೆ ಆಡಳಿತಾರೂಢ ಟಿಡಿಪಿ ಕೇವಲ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಇನ್ನು ಕಾಂಗ್ರೆಸ್ ಮತ್ತು ಬಿಜೆಪಿ ಆಂಧ್ರದಲ್ಲಿ ಸೊನ್ನೆ ಸುತ್ತಿದ್ದು, ಯಾವ ಕ್ಷೇತ್ರದಲ್ಲೂ ಮುನ್ನಡೆ ಸಾಧಿಸಿಲ್ಲ. ಅಲ್ಲದೇ ಏಳು ಕ್ಷೇತ್ರಗಳಲ್ಲಿ ಇತರರು ಮುನ್ನಡೆ ದಾಖಲಿಸಿದ್ದಾರೆ.
