ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಜೈ ರಾಮ್ ಠಾಕೂರ್ ಹಿಮಾಚಲ ಪ್ರದೇಶದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.

ನವದೆಹಲಿ (ಡಿ.27): ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಜೈ ರಾಮ್ ಠಾಕೂರ್ ಹಿಮಾಚಲ ಪ್ರದೇಶದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.

ಠಾಕೂರ್ ಜೊತೆಗೆ 11 ಸಚಿವರಾದ ಅನಿಲ್ ಶರ್ಮಾ, ಸರ್ವೀನ್ ಚೌಧರಿ, ರಾಮ್ ಲಾಲ್ ಮಾರ್ಕಂಡ, ವೀರೇಂದರ್ ಕನ್ವಾರ್ ಮತ್ತು ವಿಕ್ರಮ್ ಸಿಂಗ್ ಹೊಸ ಸಂಪುಟ ಸಭೆಗೆ ಸೇರ್ಪಡೆಗೊಂಡರು.

ಬಿಜೆಪಿ ಸಿಎಂ ಅಭ್ಯರ್ಥಿ ಎಂದು ಘೋಷಿಸಲಾಗಿದ್ದ ಪ್ರೇಮ್ ಕುಮಾರ್ ಧುಮಾಲ್ ಪರಾಭವಗೊಳ್ಳುತ್ತಾರೆ. ಆದರೆ ಬಿಜೆಪಿ ಬಹುಮತವನ್ನು ಗಳಿಸುತ್ತದೆ. ಅಂತಿಮವಾಗಿ ಜೈರಾಮ್ ಠಾಕೂರ್'ರನ್ನು ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದೇ ಮೊದಲ ಬಾರಿಗೆ ಕಣಿವೆ ರಾಜ್ಯದ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿರುವುದು ಗಮನಾರ್ಹ ಸಂಗತಿಯಾಗಿದೆ.