ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಜೈರಾಂ ಠಾಕೂರ್ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಶಿಮ್ಲಾ (ಡಿ.26): ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಜೈರಾಂ ಠಾಕೂರ್ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹಿಮಾಚಲ ಪ್ರದೇಶದ 6 ನೇ ಮುಖ್ಯಮಂತ್ರಿಯಾಗಿ 52 ವರ್ಷದ ಜೈರಾಂ ಠಾಕೂರ್ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಶಿಮ್ಲಾದ ಐತಿಹಾಸಿಕ ರಿಡ್ಜ್ ಗ್ರೌಂಡ್ನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ಈ ಪ್ರಮಾಣವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಮಂಡಿಯ ಸೆರಾಜ್'ನಿಂದ ಐದು ಬಾರಿ ಬಿಜೆಪಿ ಎಂಎಲ್ಎಯಾಗಿ ಆಯ್ಕೆಯಾಗಿರೋ ಠಾಕೂರ್ ಹಿಮಾಚಲ ಪ್ರದೇಶ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ. ಈ ಹಿಂದೆ 2007 ರಲ್ಲಿ ಪ್ರೇಮ್ ಕುಮಾರ್ ದೋಮಲ್ ಕ್ಯಾಬಿನೆಟ್'ನಲ್ಲಿ ಪಂಚಾಯತ್ ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಖಾತೆ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.
