ಸುಪ್ರೀಂ ಕೋರ್ಟ್ ನಿಷೇಧ ತೆರವುಗೊಳಿಸಿದ ನಂತರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗೂಳಿ ಕಾಳಗ ಖ್ಯಾತಿ ಜಲ್ಲಿಕಟ್ಟು ಉತ್ಸವವನ್ನು ಇಂದು ರಾಜ್ಯದಾದ್ಯಂತ ಸಂಭ್ರಮದಿಂದ ಉತ್ಸವಕ್ಕೆ ಚಾಲನೆ ನೀಡಲಾಗಿತ್ತು.
ಚೆನ್ನೈ(ಜ.22): ರಾಜ್ಯದಾದ್ಯಂತ ಅದ್ದೂರಿಯಾಗಿ ಆರಂಭಗೊಂಡ ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ 'ಜಲ್ಲಿಕಟ್ಟು'ವಿಗೆ ಆರಂಭದಲ್ಲೇ ವಿಘ್ನ ಎದುರಾಗಿದ್ದು, ಪುಡುಕೊಟ್ಟೈ ಜಿಲ್ಲೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಜಲ್ಲಿಪಟ್ಟು ಕ್ರೀಡಾಳುಗಳು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ನಿಷೇಧ ತೆರವುಗೊಳಿಸಿದ ನಂತರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗೂಳಿ ಕಾಳಗ ಖ್ಯಾತಿ ಜಲ್ಲಿಕಟ್ಟು ಉತ್ಸವವನ್ನು ಇಂದು ರಾಜ್ಯದಾದ್ಯಂತ ಸಂಭ್ರಮದಿಂದ ಉತ್ಸವಕ್ಕೆ ಚಾಲನೆ ನೀಡಲಾಗಿತ್ತು. ಪುಡುಕೊಟ್ಟೈ'ನಲ್ಲಿ ಗೂಳಿಗಳು ತಿವಿದ ಪರಿಣಾಮ ಇಬ್ಬರು ಕ್ರೀಡಾಳುಗಳು ಗಂಭೀರವಾಗಿ ಗಾಯಗೊಂಡರು. ನಂತರ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋದರಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದು, ಉಳಿದ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.
ಸರ್ಕಾರವೂ ಒಳಗೊಂಡು ಇಡೀ ಸಾರ್ವಜನಿಕರು ಒಳಗೊಂಡು ರಾಜ್ಯದ ಬಹುತೇಕ ಎಲ್ಲ ಕ್ಷೇತ್ರದ ಪ್ರಮುಖರು 2 ವಾರ ಧೀರ್ಘ ಹೋರಾಟ ನಡೆಸಿದ ಪರಿಣಾಮ ಕೇಂದ್ರ ಸರ್ಕಾರ ನಿಷೇಧವನ್ನು ತೆರವುಗೊಳಿಸಿತ್ತು. ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ನಿಷೇಧ ತೆರವುಗೊಳಿಸುವಂತೆ ಮೂರು ಬಾರಿ ಪ್ರಧಾನಿಯನ್ನು ಭೇಟಿ ಮಾಡಿ ಮನವಿ ಮಾಡಿದ್ದರು.
ಆದಾಗ್ಯೂ ಜಲ್ಲಿಕಟ್ಟಿಗೆ ಖ್ಯಾತವಾಗಿರುವ ಮಧುರೈನ ಅಳಂಗನಲ್ಲೂರಿನಲ್ಲಿ ಪ್ರತಿಭಟನೆ ಮುಂದುವರಿದಿದ್ದು ಶಾಶ್ವತ ಪರಿಹಾರ ಒದಗಿಸಬೇಕೆಂದು ಹೋರಾಟಗಾರರು ಉತ್ಸವವನ್ನು ಬಹಿಷ್ಕರಿಸಿದ್ದಾರೆ. ಉತ್ಸವಕ್ಕೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಚಾಲನೆ ನೀಡಬೇಕಿತ್ತು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಉದ್ಘಾಟನೆಯಿಂದ ಹಿಂದೆ ಸರಿದಿದ್ದಾರೆ. 2014ರಲ್ಲಿ ಪ್ರಾಣಿಗಳ ಮೇಲೆ ಹಿಂಸೆ ನಡೆಯುತ್ತಿದೆ ಎಂಬ ಕಾರಣಕ್ಕಾಗಿ ಸುಪ್ರೀಂ ಕೋರ್ಟ್ ಜಲ್ಲಿಕಟ್ಟನ್ನು ನಿಷೇಧಿಸಿತ್ತು. ಸುಪ್ರೀಂ ಕೋರ್ಟ್ ನಿಷೇಧವನ್ನು ಖಂಡಿಸಿ ರಾಜಕೀಯ, ಸಿನಿಮಾ ಸೇರಿದಂತೆ ಎಲ್ಲ ಕ್ಷೇತ್ರದ ಗಣ್ಯರು ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಂಡು ಸಾಂಪ್ರದಾಯಿಕ ಉತ್ಸವಕ್ಕೆ ಜಯ ದೊರಕಿಸಿಕೊಡಲು ಯಶಸ್ವಿಯಾಗಿದ್ದರು.
