ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಚುನಾವಣೆ ಶೀಘ್ರದಲ್ಲೇ ನಡೆಯುವ ಸಾಧ್ಯತೆ ಇದೆ.
ನವದೆಹಲಿ: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯನ್ನು ಚುನಾವಣಾ ಆಯೋಗ ನಡೆಸುವ ಸಾಧ್ಯತೆ. ಬಹುಪಾಲು ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ಸಚಿವಾಲಯದ ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ತನ್ನ ಅಭಿಪ್ರಾಯವನ್ನು ಚುನಾವಣಾ ಆಯೋಗಕ್ಕೆ ತಿಳಿಸಿದ್ದು, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಹರಿಯಾಣ ವಿಧಾನಸಭಾ ಚುನಾವಣೆ ವೇಳೆಯಲ್ಲೇ ನಡೆಸಲು ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದೆ ಎನ್ನಲಾಗಿದೆ.
ಇನ್ನೊಬ್ಬ ಅಧಿಕಾರಿ ತಿಳಿಸಿರುವ ಮಾಹಿತಿಯಂತೆ, ಅಮರನಾಥ ಯಾತ್ರೆ ಸಂದರ್ಭದಲ್ಲಿ ಭದ್ರತಾ ಸಮಸ್ಯೆ ಎದುರಾಗಬಹುದಾದ ಸಾಧ್ಯತೆ ಇದ್ದುದರಿಂದ ನವೆಂಬರ್‌ನಲ್ಲಿ ನಡೆಸಬಹುದಾದ ಸಾಧ್ಯತೆಯೇ ಹೆಚ್ಚು ಎಂದಿದ್ದಾರೆ.
