ಶ್ರೀನಗರ, [ಫೆ.16]: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರಿ ದಾಳಿ ನಡೆಸಿದ್ದ ಉಗ್ರರು ಇಂದು [ಶನಿವಾರ] ಮತ್ತೆ ಸೇನೆ ಮೇಲೆ ದಾಳಿ ನಡೆಸಿದ್ದಾರೆ. 

ಕಾಶ್ಮೀರ ರಜೋರಿಯಲ್ಲಿ ಉಗ್ರರು ನಡೆಸಿರುವ ದಾಳಿಯಲ್ಲಿ ಒಬ್ಬ ಸೇನಾ ಅಧಿಕಾರಿ ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧರ ಅಂತ್ಯಸಂಸ್ಕಾರಕ್ಕೆ ಮುನ್ನವೇ ಮತ್ತೊಂದು ದಾಳಿ ನಡೆಸಿರುವುದು ಮತ್ತಷ್ಟು ಭಾರತೀಯರನ್ನು ಕೆರಳಿಸಿದೆ.

ಹುತಾತ್ಮರಾದ ಸೇನಾ ಅಧಿಕಾರಿ ಯಾರು ಎನ್ನುವುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಫೆ.14ರಂದು ಪಾಕ್ ಮೂಲದ ಜೈಷ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರ ಸ್ಫೋಟಕ ತುಂಬಿದ ಕಾರನ್ನು ಯೋಧರು ತೆರಳುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆಸಿ ಭೀಕರ ಸ್ಫೋಟ ಸಂಭವಿಸಿತ್ತು. ಇದರಿಂದ 44  ಯೊಧರು ಹುತಾತ್ಮರಾಗಿದ್ದರು. 

ಸಾಂದರ್ಭಿಕ ಚಿತ್ರ