ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಸಿದ್ದರಾಮಯ್ಯರಿಂದ ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದ ಅವರು, ಪರಮೇಶ್ವರ್ ಸಿಎಂ ಆಗಲಿ. ಈ ಮೂಲಕ ರಾಜ್ಯದ ಮೊದಲ ದಲಿತ ಸಿಎಂ ಎಂಬ ಹೆಗ್ಗಳಿಕೆ ಪಡೆಯಲಿ ಎಂದು ಪೂಜಾರಿ ಹೇಳಿದ್ದಾರೆ.

ಮಂಗಳೂರು (ಅ.31): ಸಿಎಂ ಸಿದ್ದರಾಮಯ್ಯ ವಿರುದ್ಧ ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಮತ್ತೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೂಜಾರಿ, ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಆಗಮಿಸಿದ್ದು, ತಾಕತ್ತಿದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಸಿದ್ದರಾಮಯ್ಯರಿಂದ ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದ ಅವರು, ಪರಮೇಶ್ವರ್ ಸಿಎಂ ಆಗಲಿ. ಈ ಮೂಲಕ ರಾಜ್ಯದ ಮೊದಲ ದಲಿತ ಸಿಎಂ ಎಂಬ ಹೆಗ್ಗಳಿಕೆ ಪಡೆಯಲಿ ಎಂದು ಹೇಳಿದ್ದಾರೆ.

ಈಗಾಗಲೇ 20 ಶಾಸಕರು ಬಂಡಾಯದ ಕಹಳೆ ಮೊಳಗಿಸಿದ್ದಾರೆ. ಹತ್ತರಷ್ಟು ಶಾಸಕರು ಬಂಡೆದ್ದರೂ ಕಾಂಗ್ರೆಸ್ ಅಧಿಕಾರದಲ್ಲಿ ಉಳಿಯದು ಎಂದು ಎಚ್ಚರಿಸಿದ ಪೂಜಾರಿ, ಅಧಿಕಾರಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸರ್ಕಸ್ ಮಾಡುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ನಿದ್ದೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.