ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರದ ಗದ್ದುಗೆಗೇರಲು ಆಡಳಿತಾರೂಢ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿರುವ ಬೆನ್ನಲ್ಲೇ ಆಘಾತವಾಗಿದೆ.

ರಾಜಸ್ಥಾನ, [ಸೆ.23]: ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರದ ಗದ್ದುಗೆಗೇರಲು ಆಡಳಿತಾರೂಢ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿರುವ ಬೆನ್ನಲ್ಲೇ ಆಘಾತವಾಗಿದೆ.

ಮಾಜಿ ಕೇಂದ್ರ ಸಚಿವ, ಬಿಜೆಪಿಯ ಹಿರಿಯ ಮುಖಂಡ ಜಸ್ವಂತ್‌ ಸಿಂಗ್‌ ಅವರ ಪುತ್ರ, ಹಾಲಿ ಶಾಸಕ ಮಾನವೇಂದ್ರ ಸಿಂಗ್‌ ಅವರು ಪಕ್ಷ ತೊರೆದಿದ್ದಾರೆ. ಅಲ್ಲದೆ, ‘ನಾನು ಕಮಲ ಪಕ್ಷವನ್ನು ಆಯ್ಕೆ ಮಾಡಿಕೊಂಡು ತಪ್ಪು ಮಾಡಿದೆ’ ಎಂದು ವಿಷಾದಿಸಿದ್ದಾರೆ. 

ಶನಿವಾರ ತಾವು ಪ್ರತಿನಿಧಿಸುವ ಬಾಢಮೇರ್‌ ಕ್ಷೇತ್ರದಲ್ಲಿ ಸ್ವಾಭಿಮಾನ ರಾರ‍ಯಲಿ ನಡೆಸಿದ ಅವರು, ಬಿಜೆಪಿ ಸರ್ಕಾರದ ವಿರುದ್ಧ ಕುಟುಕಿದರು. 2014ರ ಲೋಕಸಭಾ ಚುನಾವಣೆಯಲ್ಲಿ ನನ್ನ ತಂದೆಗೆ ಟಿಕೆಟ್‌ ನಿರಾಕರಿಸಲಾಯಿತು. 

ಆದರೂ, ನಾನು ಸಂಯಮ ಕಾಪಾಡಿಕೊಂಡಿದ್ದೆ. ಆದರೆ, ಇದೀಗ ಎಲ್ಲವನ್ನೂ ಹೇಳುವ ಸಂದರ್ಭ ಬಂದಿದೆ’ ಎಂದು ಸಿಂಗ್‌ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.