ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಖಾತೆ ಬದಲಾಯಿಸುವ ಸಾಧ್ಯಯಿದೆ ಎಂದು ಕಾಂಗ್ರೆಸ್ ಪಕ್ಷದ ಉಸ್ತುವಾರಿಯಲ್ಲಿರುವ ‘ನ್ಯಾಷನಲ್ ಹೆರಾಲ್ಡ್’ ವೆಬ್‌ಸೈಟ್ ವರದಿ ಮಾಡಿದೆ.

ನವದೆಹಲಿ(ಅ.06): ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಖಾತೆ ಬದಲಾಯಿಸುವ ಸಾಧ್ಯಯಿದೆ ಎಂದು ಕಾಂಗ್ರೆಸ್ ಪಕ್ಷದ ಉಸ್ತುವಾರಿಯಲ್ಲಿರುವ ‘ನ್ಯಾಷನಲ್ ಹೆರಾಲ್ಡ್’ ವೆಬ್‌ಸೈಟ್ ವರದಿ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ದಿಢೀರ್ ಸಭೆ ನಡೆಸಿದ್ದರು. ಈ ಸಭೆಯ ಬಳಿಕ ಮೋದಿ ಮತ್ತು ಅಮಿತ್ ಶಾ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಖಾತೆ ಬದಲಾವಣೆ ಕುರಿತು ಚರ್ಚೆ ನಡೆಸಲಾಯಿತು ಎಂದು ವೆಬ್‌ಸೈಟ್ ವರದಿ ಮಾಡಿದೆ.

ಜೇಟ್ಲಿ ಅವರನ್ನು ಹಣಕಾಸು ಖಾತೆಯಿಂದ ಗೃಹ ಖಾತೆ ವರ್ಗಾಯಿಸುವ ಸಾಧ್ಯತೆ ಇದೆ. ಹಾಲಿ ಗೃಹ ಸಚಿವ ರಾಜ್‌'ನಾಥ್‌ ಸಿಂಗ್ ಅವರನ್ನು ಉಪಪ್ರಧಾನಿ ಮಾಡುವ ಸಾಧ್ಯತೆ ಇದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.