ಜಯಾಲಲಿತಾ ಆರೋಗ್ಯ ಪರಿಸ್ಥಿತಿ ತೀರಾ ಗಂಭೀರವಾಗಿದೆ, ಜೀವರಕ್ಷಕ ಸಾಧನಗಳ ಮೂಲಕ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರ ತಂಡ ತಪಾಸಣೆ ನಡೆಸುತ್ತಿದ್ದಾರೆ, ಎಂದು ಅಪೊಲೋ ಆಸ್ಪತ್ರೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ.

ಚೆನ್ನೈ (ಡಿ.04): ನಿನ್ನೆ ಸಂಜೆ ಹೃದಯಾಘಾತಕ್ಕೊಳಗಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಾಲಲಿತಾ ಆರೋಗ್ಯ ಸ್ಥಿತಿ ಗಂಭೀರವಾಗಿದೆಯೆಂದು ಅಪೊಲೋ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ಜಯಾಲಲಿತಾ ಆರೋಗ್ಯ ಪರಿಸ್ಥಿತಿ ತೀರಾ ಗಂಭೀರವಾಗಿದೆ, ಜೀವರಕ್ಷಕ ಸಾಧನಗಳ ಮೂಲಕ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರ ತಂಡ ತಪಾಸಣೆ ನಡೆಸುತ್ತಿದ್ದಾರೆ, ಎಂದು ಅಪೊಲೋ ಆಸ್ಪತ್ರೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ.

 ಕಳೆದ ಎರಡು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಾಲಲಿತಾ ಅವರಿಗೆ ನಿನ್ನೆ ಸಂಜೆ ಹೃದಯಘಾತವಾಗಿದೆ.

ತೀವ್ರ ಜ್ವರ ಹಾಗೂ ನಿರ್ಜಲೀಕರಣ ಟಾದ ಹಿನ್ನೆಯಲ್ಲಿ ಜಯಾ ಅವರು ಸೆ.22ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಏಮ್ಸ್ ಹಾಗೂ ಲಂಡನ್’ನ ತಜ್ಞ ವೈದ್ಯರನ್ನೊಳಗೊಂಡ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ.