ಚೆನ್ನೈ (ಅ.01): ಕಳೆದ ಒಂದು ವಾರದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಸಿಎಂ ಜಯಲಲಿತಾ ಆರೋಗ್ಯವನ್ನು ಇಂಗ್ಲೆಂಡ್ ನ ವಿಶೇಷ ವೈದ್ಯರ ತಂಡ ನೋಡಿಕೊಳ್ಳುತ್ತಿದೆ ಎಂದು ಅವರ ಪಕ್ಷ ಹೇಳಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಯಲಲಿತಾ ಆರೋಗ್ಯದ ಬಗ್ಗೆ ಹರಡುತ್ತಿರುವ ವದಂತಿಗಳನ್ನು ತಳ್ಳಿ ಹಾಕಿದ ಎಐಎಡಿಎಂಕೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದಿದೆ.

ಜಯಲಲಿತಾರವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಆಸ್ಪತ್ರೆಯಿಂದ ಬೇಗ ಬಿಡುಗಡೆಯಾಗುವ ನಿರೀಕ್ಷೆಯಿದೆ. ಜಯಲಲಿತಾ ಫೋಟೋ ಬಿಡುಗಡೆ ಮಾಡುವ ಅಗತ್ಯವಿಲ್ಲ. ನಾವು ಜನರ ಪ್ರಶ್ನೆಗಳಿಗೆ ಮಾತ್ರ ಜವಾಬ್ದಾರರು, ಪ್ರತಿಪಕ್ಷಗಳಿಗಲ್ಲ ಎಂದು ಎಐಎಡಿಎಂಕೆ ವಕ್ತಾರ ಸ್ಪಷ್ಟಪಡಿಸಿದ್ದಾರೆ.