ಚೆನ್ನೈ(ಸೆ. 23): ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವ ಜಯಲಲಿತಾ ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದ್ರೆ, ಅವರ ಮೇಲೆ ಇನ್ನೂ ಕೂಡ ನಿಗಾ ವಹಿಸಲಾಗಿದೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಜ್ವರ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ ಜಯಲಲಿತಾ ಬಳಲುತ್ತಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಎದುರು ರಾತ್ರಿಯಿಡೀ ಜಯಲಲಿತಾ ಅಭಿಮಾನಿಗಳು ಜಮಾಯಿಸಿದ್ದರು.