ಜಯಾ ಅವರ ಸಾವಿನ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಎನ್‌'ಜಿಒ ಪಿಐಎಲ್ ಸಲ್ಲಿಸಿ, ಹೆಚ್ಚಿನ ತನಿಖೆಗಾಗಿ ಬೇಡಿಕೆ ಇಟ್ಟಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಚೆನ್ನೈ(ಡಿ.14): ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಚೆನ್ನೈ ಮೂಲದ ಸರ್ಕಾರೇತರ ಸಂಸ್ಥೆ (ಎನ್‌'ಜಿಒ)ಯೊಂದು ಸುಪ್ರೀಂ ಕೋರ್ಟ್‌'ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಸಲ್ಲಿಸಿದೆ.

ಸೆ. 22ರಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಸುಮಾರು ಎರಡು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಜಯಾ ಅವರ ಸಂಪೂರ್ಣ ವೈದ್ಯಕೀಯ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದೂ ಎನ್‌ಜಿಒ ತನ್ನ ಅರ್ಜಿಯಲ್ಲಿ ಕೋರಿದೆ.

ಜಯಾ ಅವರ ಸಾವಿನ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಎನ್‌'ಜಿಒ ಪಿಐಎಲ್ ಸಲ್ಲಿಸಿ, ಹೆಚ್ಚಿನ ತನಿಖೆಗಾಗಿ ಬೇಡಿಕೆ ಇಟ್ಟಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.