ಚೆನ್ನೈ(ಅ.5): ಆನಾರೋಗ್ಯ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರು ಈ ವಾರಾಂತ್ಯದಲ್ಲಿ ಡಿಸ್ಚಾರ್ಜ್ ಆಗಿ ಹಲವು ಊಹಾಪೋಹಗಳಿಗೆ ತೆರೆ ಎಳೆಯಲಿದ್ದಾರಂತೆ. ಆಸ್ಪತ್ರೆಯಲ್ಲಿ ಬೇರೆ ರೋಗಿಗಳಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಜಯಲಲಿತಾ ಡಿಸ್ಚಾರ್ಜ್ ಆಗಲಿದ್ದಾರೆ. ಆಸ್ಪತ್ರೆಯಿಂದ ಮನೆಗೆ ಶಿಫ್ಟ್ ಆಗಿ ಮನೆಯಲ್ಲಿ ಆಸ್ಪತ್ರೆಯ ಮಾದರಿ ಚಿಕಿತ್ಸೆ ನೀಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.