ಕನ್ನಡ ಶಾಲೆಯಲ್ಲಿ ಮಲಯಾಳಿ ಶಿಕ್ಷಕರನ್ನು ನೇಮಕ ಮಾಡಿರುವ ಸಂಬಂಧ ಸಚಿವೆ ಜಯಮಾಲ ಅವರು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಶೀಘ್ರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. 

ಬೆಂಗಳೂರು :  ರಾಜ್ಯದ ಗಡಿಭಾಗದಲ್ಲಿರುವ ಕೇರಳದ ಕಾಸರಗೋಡಿನ ಕನ್ನಡ ಪ್ರಾಥಮಿಕ ಶಾಲೆಗಳಿಗೆ ಮಲೆಯಾಳಿ ಶಿಕ್ಷಕರನ್ನು ನೇಮಿಸಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ. ಜಯಮಾಲಾ ಹೇಳಿದ್ದಾರೆ. ಈ ಕುರಿತು ‘ಕನ್ನಡಪ್ರಭ’ದೊಂದಿಗೆ ಮಾತನಾಡಿದ ಸಚಿವರು, ಕಾಸರಗೋಡಿನ ಕನ್ನಡ ಶಾಲೆಗಳಿಗೆ ಮಲೆಯಾಳಿ ಶಿಕ್ಷಕರನ್ನು ನೇಮಿಸಿದ್ದು ಗಂಭೀರ ವಿಚಾರವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದರಿಂದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆ ನಿವಾರಿಸಲು ಕೂಡಲೇ ಕ್ರಮ ಕೈಗೊಳ್ಳುವ ಅಗತ್ಯವಿದೆ. ಈ ಬಗ್ಗೆ ಸಂಬಂಧಪಟ್ಟಅಧಿಕಾರಿಗಳಿಗೆ ಸೂಚನೆ ನೀಡಬೇಕು. ಕೇರಳ ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ಹಿತ ಕಾಯುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್‌.ಮಹೇಶ್‌ ಅವರಿಗೆ ಈಗಾಗಲೇ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.