ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು ರೈತರು ಬಹಳ ದಿನಗಳಿಂದ ಕಾಯುತ್ತಿದ್ದ ಸಾಲ ಮನ್ನಾಕ್ಕೆ ಒಪ್ಪಿಗೆ ಸಿಕ್ಕಿದೆ. ಹೊಸ ಸರಕಾರ ಹೊಸ ಬಜೆಟ್ ಸಹ ಮಂಡನೆ ಮಾಡಲಿದೆ. 

ಬೆಂಗಳೂರು[ಜು.1]  ಬಜೆಟ್ ಮಂಡನೆ ಮತ್ತು ರಾಜ್ಯದ ರೈತರ ಸಾಲಮನ್ನಾ ವಿಷಯದಲ್ಲಿ ಕಾಂಗ್ರೆಸ್- ಜೆಡಿಎಸ್ ನಡುವಿನ ಗೊಂದಲಕ್ಕೆ ತೆರೆಬಿದ್ದಿದೆ. ಇಂದು ನಡೆದ ಸಮನ್ವಯ ಸಮಿತಿಯ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮುಂದುವರಿಸಲು ಸಮಿತಿ ಒಪ್ಪಿಗೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಮ್ಮಿಶ್ರ ಸರ್ಕಾರ ರಚನೆಯ ಬಳಿಕ ಅಸ್ವಿಸ್ತಕ್ಕೆ ಬಂದ ಸಮನ್ವಯ ಸಮಿತಿಯ ಎರಡನೇ ಸಭೆ ಹಲವು ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ, ಕಾಂಗ್ರೆಸ್- ಜೆಡಿಎಸ್ ನಡುವಿನ ಉದ್ಭವಿಸಿದ್ದ ಅನುಮಾನ, ಗೊಂದಲಕ್ಕೆ ತೆರೆ ಎಳೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರೈತರ ಬೆಳೆ ಸಾಲ ಮನ್ನಾ ಮತ್ತು ಜುಲೈ 5 ರಂದು ಸಿಎಂ ಕುಮಾರಸ್ವಾಮಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವುದಕ್ಕೆ ಒಪ್ಪಿಗೆ ನೀಡಿದೆ.

ನೀರಾವರಿ ಯೋಜನೆಗಳಿಗೆ 1 ಲಕ್ಷ 22 ಕೋಟಿ ರೂ. ಮೀಸಲಿಗೆ ನಿಗದಿ, ಮುಂದಿನ 5 ವರ್ಷದಲ್ಲಿ ರಾಜ್ಯದಲ್ಲಿ 20 ಲಕ್ಷ ಮನೆ ನಿರ್ಮಾಣ, 5 ವರ್ಷದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿಗೆ ಅಗತ್ಯ ಕ್ರಮ, ಕಾಂಗ್ರೆಸ್​ ಸರ್ಕಾರದ ಮಹತ್ವಾಂಕ್ಷೆಯ ‘ಆರೋಗ್ಯ ಕರ್ನಾಟಕ’ ಯೋಜನೆ ಅನುಷ್ಠಾನ ಸೇರಿಂತೆ ಹಿಂದಿನ ಸರ್ಕಾರ ಎಲ್ಲ ಯೋಜನೆಗಳ ಮುಂದುವರಿಕೆಗೆ ಸಮಿತಿ ನಿರ್ಧರಿಸಿದೆ.