ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ

JD(U) spokesperson hints BJP to contest far lesser seats in 2019 compared to 2014
Highlights

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬಣ ಎನ್ ಡಿಎ ಜೊತೆಗೆ ಇರಲಿದೆ ಎಂದು ಜೆಡಿಯು ವಕ್ತಾರರಾದ ಅಜಯ್ ಅಲೋಕ್ ಹೇಳಿದ್ದಾರೆ. 

ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬಣ ಎನ್ ಡಿಎ ಜೊತೆಗೆ ಇರಲಿದೆ ಎಂದು ಜೆಡಿಯು ವಕ್ತಾರರಾದ ಅಜಯ್ ಅಲೋಕ್ ಹೇಳಿದ್ದಾರೆ. ಅಲ್ಲದೇ ಎನ್ ಡಿಎ ಜೊತೆಗೆ ಸೀಟುಗಳ ಹಂಚಿಕೆಯಲ್ಲಿ ಯಾವುದೇ ರೀತಿಯಾದ ಗೊಂದಲವೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ನಾವು 25 ಸೀಟುಗಳಲ್ಲಿ ಸ್ಪರ್ಧೆ ಮಾಡುತ್ತಿದ್ದರೆ ಬಿಜೆಪಿ 15 ಸೀಟುಗಳಲ್ಲಿ ಸ್ಪರ್ಧೆ ಮಾಡಲಿದ್ದು, ಈ ಬಗ್ಗೆ ಎಲ್ಲಾ ಪ್ರಮುಖ ನಾಯಕರು ಸೇರಿ ಚರ್ಚೆ ನಡೆಸಿ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ. ಲೋಕಸಭಾ ಚುನಾವಣೆಯ ಬಗ್ಗೆ ನಾಯಕರ ನಡುವೆ ಸಂಪೂರ್ಣ ಮಾತುಕತೆ ನಡೆದಿದೆ ಎಂದಿದ್ದಾರೆ. 

ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಬಿಜೆಪಿಯು 40 ಸ್ಥಾನಗಳಲ್ಲಿ 22 ಸ್ಥಾನಗಳಲ್ಲಿ ಜಯಗಳಿಸಿತ್ತು. ಆದರೆ ಈ ಬಾರಿ ಜೆಡಿಯು ಜೊತೆಗಿನ ಮೈತ್ರಿಯಲ್ಲಿ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾಯಕರು ತೀರ್ಮಾನ ಮಾಡಿಕೊಂಡಿದ್ದಾರೆ. 

loader